ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾಲ್ವಾನ್ ಸಂಘರ್ಷ: ಬಲಿಯಾದ ಚೀನಾ ಯೋಧರ ವಿವರ ಕೊನೆಗೂ ಬಹಿರಂಗ

Last Updated 19 ಫೆಬ್ರುವರಿ 2021, 3:05 IST
ಅಕ್ಷರ ಗಾತ್ರ

ನವದೆಹಲಿ: ಕೊನೆಗೂ ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ ಹತರಾಗಿರುವ ಸೈನಿಕರ ಹೆಸರುಗಳನ್ನು ಚೀನಾ ಬಹಿರಂಗಪಡಿಸಿದೆ.

ಈ ಬಗ್ಗೆ ಚೀನಾ ಮಾಧ್ಯಮಗಳಿಂದಲೇ ವರದಿಯಾಗಿದೆ. ಗಾಲ್ವಾನ್ ಘರ್ಷಣೆಯಲ್ಲಿ ಪ್ರಾಣ ತ್ಯಾಗ ಮಾಡಿದ ಸೈನಿಕರಿಗೆ ಅಲ್ಲಿನ ಸರ್ಕಾರ ಶೌರ್ಯ ಪ್ರಶಸ್ತಿ ನೀಡಲು ಮುಂದಾಗಿದೆ.

ಕಳೆದ ವರ್ಷ ಗಾಲ್ವಾನ್‌ ಕಣಿವೆಯ ವಾಸ್ತವ ಗಡಿ ನಿಯಂತ್ರಣಾ ರೇಖೆ (ಎಲ್‌ಎಸಿ) ಬಳಿ ಭಾರತೀಯ ಸೇನೆ ಹಾಗೂ ಚೀನಾದ ಪೀಪಲ್‌ ಲಿಬರೇಷನ್‌ ಆರ್ಮಿ (ಪಿಎಲ್‌ಎ) ನಡುವೆ ಕಾಳಗ ನಡೆದಿತ್ತು. ಆದರೆ ಗಾಲ್ವಾನ್ ಘರ್ಷಣೆಯಲ್ಲಿ ಹತರಾದ ಸೈನಿಕರ ವಿವರಗಳನ್ನು ಬಹಿರಂಗಪಡಿಸಲು ಚೀನಾ ನಿರಾಕರಿಸಿತ್ತು. ಅಲ್ಲದೆ ಯಾವುದೇ ಸೈನಿಕರು ಹತರಾಗಿಲ್ಲ ಎಂಬ ಮೊಂಡು ವಾದವನ್ನು ಪದೇ ಪದೇ ಮಂಡಿಸಿತ್ತು.

ಈಗ ಗಾಲ್ವಾನ್ ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡ ನಾಲ್ವರು ಸೈನಿಕರಿಗೆ ಚೀನಾದ ಸೆಂಟ್ರಲ್ ಮಿಲಿಟರಿ ಕಮಿಷನ್ (Central Military Commission awards), ಶೌರ್ಯ ಪ್ರಶಸ್ತಿ ನೀಡುವುದಾಗಿ ಘೋಷಿಸಿದೆ. ಇದರೊಂದಿಗೆ ಚೀನಾ ಮುಚ್ಚಿಟ್ಟ ಸತ್ಯ ಬಹಿರಂಗವಾಗಿದೆ.

ಕಳೆದ ವರ್ಷ ಜೂನ್ ತಿಂಗಳಲ್ಲಿ ಗಾಲ್ವಾನ್ ಕಣಿವೆಯಲ್ಲಿ ಪಿಎಲ್‌ಎ ಜೊತೆಗಿನ ಘರ್ಷಣೆಯಲ್ಲಿ ಭಾರತೀಯ ಸೇನೆಯ 20 ಸೈನಿಕರು ಹುತಾತ್ಮರಾಗಿದ್ದರು. ಪ್ರತಿದಾಳಿಯಲ್ಲಿ ಚೀನಾದ 43 ಸೈನಿಕರನ್ನು ಹತ್ಯೆಗೈಯಲಾಗಿದೆ ಎಂದು ಭಾರತೀಯ ಸೇನಾ ಮೂಲಗಳು ತಿಳಿಸಿತ್ತು. ಇದನ್ನು ಚೀನಾ ನಿರಾಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT