ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾಗೆ ಆಗಮಿಸಿದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ

Last Updated 17 ಫೆಬ್ರುವರಿ 2021, 10:19 IST
ಅಕ್ಷರ ಗಾತ್ರ

ಮಾಸ್ಕೊ: ರಷ್ಯಾಗೆ ಎರಡು ದಿನಗಳ ಪ್ರವಾಸ ಕೈಗೊಂಡಿರುವ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು ರಷ್ಯಾದ ಅಧಿಕಾರಿಗಳನ್ನು ಭೇಟಿಯಾದರು. ಈ ವೇಳೆ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಸಮಸ್ಯೆಗಳ ಕುರಿತಾಗಿ ಚರ್ಚೆ ನಡೆಸಿದ್ದಾರೆ.

‘ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಇನ್ನಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರು ರಷ್ಯಾಗೆ ಬಂದಿದ್ದಾರೆ’ ಎಂದು ರಷ್ಯಾದಲ್ಲಿರುವ ಭಾರತದ ರಾಯಭಾರ ಕಚೇರಿ ಟ್ವೀಟ್‌ ಮಾಡಿದೆ.

‘ನಾನು ಸುಂದರ ನಗರಿ ಮಾಸ್ಕೊಗೆ ಆಗಮಿಸಿದ್ದೇನೆ. ಇದು ಈ ವರ್ಷದ ನನ್ನ ಮೊದಲ ವಿದೇಶ ಪ್ರಯಾಣವಾಗಿದೆ. ರಷ್ಯಾದ ಉಪ ವಿದೇಶಾಂಗ ಕಾರ್ಯದರ್ಶಿಯನ್ನು ಭೇಟಿಯಾಗಲು ನಾನು ಉತ್ಸುಕನಾಗಿದ್ದೇನೆ. ಈ ಭೇಟಿ ವೇಳೆ ನಾವು ಮಹತ್ವದ ವಿಷಯಗಳ ಕುರಿತು ಚರ್ಚೆ ನಡೆಸಲಿದ್ದೇವೆ’ ಎಂದು ಹೇಳಿರುವ ವಿಡಿಯೊ ಸಂದೇಶವನ್ನು ಶ್ರಿಂಗ್ಲಾ ಅವರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT