ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಮಾಜಿ ಮಿಸ್ ಅಮೆರಿಕ

Last Updated 31 ಜನವರಿ 2022, 6:20 IST
ಅಕ್ಷರ ಗಾತ್ರ

ನ್ಯೂಯಾರ್ಕ್: ಜೀವನದಲ್ಲಿ ಜಿಗುಪ್ಸೆಗೊಂಡು ಮಾಜಿ ಮಿಸ್ ಅಮೆರಿಕ ಚೆಸ್ಲಿ ಕ್ರಿಸ್ಟ್ (30) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ ಪ್ರದೇಶದ ಕಟ್ಟಡವೊಂದರಿಂದ ಜಿಗಿದು ಚೆಸ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲವಾದರೂ ಜೀವನದಲ್ಲಿ ಜಿಗುಪ್ಸೆಗೊಂಡಿದ್ದರು ಎಂದು ಕುಟುಂಬದವರು ತಿಳಿಸಿರುವುದಾಗಿ ಪೊಲೀಸರು ಹೇಳಿದ್ದಾರೆ.

30 ವರ್ಷದ ಈ ಮಾಡೆಲ್ 2019 ರಲ್ಲಿ ಮಿಸ್ ಯುಎಸ್ಎ ಗೆದ್ದಿದ್ದರು‌. ‘ಚೆಸ್ಲಿ ನಿಧನದಿಂದ ನಮಗೆ ತೀವ್ರ ಆಘಾತವಾಗಿದೆ‘ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಚೆಸ್ಲಿ ಆತ್ಮಹತ್ಯೆಗೂ ಮುನ್ನ ಈ ದಿನ ನಿಮ್ಮ ಬಾಳಿನಲ್ಲಿ ಶಾಂತಿ ನೆಮ್ಮದಿ ತರಬಹುದು ಎಂದು ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಹಾಕಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ‌.

ಚೆಸ್ಲಿ ಅವರು ಅಮೆರಿಕದ ಮನರಂಜನಾ ಚಾನೆಲ್ ಎಕ್ಸ್‌ಟ್ರಾ ಟಿವಿಗೆ ನಿರೂಪಕಿಯಾಗಿ ಗಮನ ಸೆಳೆದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT