ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಂದಾ ವಿಚಾರಣೆ ನಡೆಸಿದ ಸಿಐಡಿ

Last Updated 26 ಮೇ 2022, 13:10 IST
ಅಕ್ಷರ ಗಾತ್ರ

ಕೊಲಂಬೊ (ಪಿಟಿಐ): ಶ್ರೀಲಂಕಾದಲ್ಲಿ ಮೇ 9ರಂದು ಸಂಭವಿಸಿದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಅಪರಾಧ ತನಿಖಾ ಇಲಾಖೆ (ಸಿಐಡಿ) ಮಾಜಿ ಪ್ರಧಾನಿ ಮಹಿಂದಾ ರಾಜಪಕ್ಸ ಅವರನ್ನು ವಿಚಾರಣೆ ನಡೆಸಿ, ಮೂರು ಗಂಟೆ ಕಾಲ ಹೇಳಿಕೆಯನ್ನು ದಾಖಲಿಸಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.‌

ತೀವ್ರ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಸರ್ಕಾರ ವಿರೋಧಿ ಪ್ರತಿಭಟನಾಕಾರರ ಮೇಲೆ ರಾಜಪಕ್ಸ ಬೆಂಬಲಿಗರು ದಾಳಿ ಮಾಡಿದ್ದ ನಂತರ ಹಿಂಸಾಚಾರ ಭುಗಿಲೆದ್ದಿತ್ತು. ಘಟನೆಯಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದರು ಹಾಗೂ 200ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದವು.

ಕಳೆದ ವಾರ ಕೂಡ ಸಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಪಕ್ಸ ಅವರ ಪಕ್ಷದ ಸಂಸದರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಅವರಲ್ಲಿ ಇಬ್ಬರನ್ನು ಬಂಧಿಸಲಾಗಿತ್ತು.

ಇನ್ನು ಕಳೆದ ಶುಕ್ರವಾರ ಮಹಿಂದ ಅವರ ಮಗ ನಮಲ್‌ ರಾಜಪಕ್ಸ ಅವರ ಹೇಳಿಕೆಯನ್ನೂ ಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT