ಸೋಮವಾರ, ಜೂನ್ 27, 2022
28 °C

ಬಲೂಚಿಸ್ತಾನದಲ್ಲಿ ಉಗ್ರರ ದಾಳಿ; ನಾಲ್ವರು ಅರೆಸೇನಾಪಡೆ ಯೋಧರ ಸಾವು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ‘ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಹೊರಠಾಣೆ ಮತ್ತು ಐಇಡಿಯನ್ನು ಸಾಗಿಸುತ್ತಿದ್ದ ಸೇನಾ ವಾಹನವನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಇದರಲ್ಲಿ ನಾಲ್ವರು ಅರೆಸೇನಾಪಡೆ ಯೋಧರು ಮೃತಪಟ್ಟಿದ್ಧಾರೆ. 8 ಮಂದಿಗೆ ಗಾಯಗಳಾಗಿವೆ’ ಎಂದು ಸೇನೆಯು ತಿಳಿಸಿದೆ.

‘ಕ್ವೆಟ್ಟಾ ಮತ್ತು ಟರ್ಬತ್‌ನಲ್ಲಿ ಫ್ರಾಂಟಿಯರ್ ಕಾರ್ಪ್ಸ್ (ಎಫ್‌ಸಿ) ತುಕಡಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ. ಮೊದಲ ದಾಳಿ, ಪಿರ್ ಇಸ್ಮಾಯಿಲ್ ಜಿಯಾರತ್ ಬಳಿಯಿರುವ ಸೇನಾ ಹೊರಠಾಣೆಯಲ್ಲಿ ನಡೆದಿದೆ. ಈ ಗುಂಡಿನ ಚಕಮಕಿಯಲ್ಲಿ 4 ರಿಂದ 5 ಉಗ್ರರು ಮೃತಪಟ್ಟಿದ್ದಾರೆ. ಎಂಟು ಮಂದಿಗೆ ಗಾಯಗಳಾಗಿವೆ. ಜತೆಗೆ ನಾಲ್ವರು ಸೈನಿಕರು ಹತರಾಗಿದ್ದು, ಆರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ’ ಎಂದು ಪಾಕಿಸ್ತಾನಿ ಸೇನೆ ಹೇಳಿಕೆ ಬಿಡುಗಡೆ ಮಾಡಿದೆ.

‘ಎರಡನೇ ದಾಳಿಯು ಟರ್ಬತ್‌ನಲ್ಲಿ ಸುಧಾರಿತ ಸ್ಪೋಟಕ ಸಾಧನಗಳನ್ನು(ಐಇಡಿ) ಸಾಗಿಸುತ್ತಿದ್ದ ಸೇನಾ ವಾಹನದ ಮೇಲೆ ನಡೆದಿದೆ. ಈ ವೇಳೆ ಇಬ್ಬರು ಸೈನಿಕರಿಗೆ ಗಾಯಗಳಾಗಿವೆ’ ಎಂದು ತಿಳಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು