ಮಂಗಳವಾರ, ಜೂನ್ 28, 2022
21 °C

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್‌ ಕಪಾಳಕ್ಕೆ ಹೊಡೆದ ಅಪರಿಚಿತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪ್ಯಾರಿಸ್: ರಾಷ್ಟ್ರವ್ಯಾಪಿ ಪ್ರವಾಸದ ಭಾಗವಾಗಿ ಮಂಗಳವಾರ ಆಗ್ನೇಯ ಫ್ರಾನ್ಸ್‌ಗೆ ಪ್ರವಾಸಕ್ಕೆ ತೆರಳಿದ್ದ ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್‌ ಅವರಿಗೆ ವ್ಯಕ್ತಿಯೊಬ್ಬ ಕಪಾಳಕ್ಕೆ ಹೊಡೆದಿರುವ ಘಟನೆ ನಡೆದಿದೆ.

ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಚಿತ್ರಗಳು ಮತ್ತು ಬಿಎಫ್‌ಎಂ ಸುದ್ದಿ ವಾಹಿನಿಯಲ್ಲಿ ಪ್ರಸಾರವಾದ ವಿಡಿಯೊದಲ್ಲಿ ಅಧ್ಯಕ್ಷ ಎಮ್ಯಾನ್ಯುಯಲ್ ಅವರು ವ್ಯಕ್ತಿಯೊಬ್ಬನನ್ನು ಸ್ವಾಗತಿಸಲು ಕೈಚಾಚಿದ್ದಾರೆ. ಆದರೆ, ಆ ವ್ಯಕ್ತಿ ಕೈಕುಲುಕುವ ಬದಲು ಕಪಾಳಕ್ಕೆ ಹೊಡೆದಿದ್ದಾನೆ.

ಕೂಡಲೇ ಮಧ್ಯಪ್ರವೇಶಿಸಿದ ಮ್ಯಾಕ್ರನ್ ಅವರ ಅಂಗರಕ್ಷಕರು ಅಷ್ಟಕ್ಕೆ ತಡೆದರು. ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.

ಅಧ್ಯಕ್ಷರ ಕಪಾಳಕ್ಕೆ ಹೊಡೆದ ವ್ಯಕ್ತಿ ಮತ್ತು ಇನ್ನೊಬ್ಬ ವ್ಯಕ್ತಿಯನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು