ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೇತಿ ಏರ್‌ಲೆನ್ಸ್‌ ಅವಘಡ: ಫ್ರೆಂಚ್‌ ತಂಡದಿಂದ ತನಿಖೆ ಆರಂಭ

Last Updated 18 ಜನವರಿ 2023, 14:28 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳದ ಪೊಖರಾದಲ್ಲಿ 72 ಜನರಿದ್ದ ಯೇತಿ ಏರ್‌ಲೈನ್ಸ್‌ಗೆ ಸೇರಿದ ಎಟಿಆರ್‌–72 ವಿಮಾನ ಪತನದ ಬಗ್ಗೆ ತನಿಖೆ ನಡೆಸಲು ಸರ್ಕಾರಕ್ಕೆ ಸಹಾಯ ಮಾಡಲು ಫ್ರಾನ್ಸ್‌ ತಜ್ಞರ ತಂಡ ಬುಧವಾರ ಪೊಖರಾಗೆ ಬಂದಿಳಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಖರಾದಲ್ಲಿರುವ ಏರ್‌ಲೈನ್ಸ್ ಸಿಬ್ಬಂದಿ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಒಂಬತ್ತು ಸದಸ್ಯರ ತಂಡ ವಿಚಾರಣೆ ನಡೆಸುತ್ತಿದೆ. ಅಪಘಾತದ ತನಿಖೆಗಾಗಿ ನೇಪಾಳ ಸರ್ಕಾರ ಐದು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ. ಮಾಜಿ ವಿಮಾನಯಾನ ಕಾರ್ಯದರ್ಶಿ ನಾಗೇಂದ್ರ ಘಿಮಿರೆ ನೇತೃತ್ವದ ತನಿಖಾ ಸಮಿತಿಯು ಅಪಘಾತದ ಬಗ್ಗೆ ತನಿಖೆ ನಡೆಸಿ 45 ದಿನಗಳಲ್ಲಿ ವರದಿ ಸಲ್ಲಿಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT