ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರಾನ್ಸ್‌ ಪ್ರಧಾನಿ ಜೀನ್‌ ಕ್ಯಾಸ್ಟೆಕ್ಸ್‌ಗೆ ಕೊರೊನಾ ಸೋಂಕು ದೃಢ

Last Updated 23 ನವೆಂಬರ್ 2021, 6:42 IST
ಅಕ್ಷರ ಗಾತ್ರ

ಪ್ಯಾರಿಸ್‌: ಫ್ರಾನ್ಸ್‌ನ ಪ್ರಧಾನಿ ಜೇನ್‌ ಕ್ಯಾಸ್ಟೆಕ್ಸ್‌ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಪ್ರಧಾನಮಂತ್ರಿ ಅವರ ಕಚೇರಿ ತಿಳಿಸಿದೆ.

ರಾಷ್ಟ್ರದಾದ್ಯಂತ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಪ್ರಧಾನಿ ಅವರು ಬೆಲ್ಜಿಯಂನಿಂದ ಮರಳಿದ ಬಳಿಕ ಅವರಿಗೆ ಸೋಂಕು ಕಾಣಿಸಿಕೊಂಡಿದೆ. ಇನ್ನು ಹತ್ತು ದಿನಗಳವರೆಗೆ ಅವರು ಪ್ರತ್ಯೇಕ ವಾಸದಲ್ಲಿದ್ದು ಅಲ್ಲಿಂದಲೇ ಕಚೇರಿ ಕೆಲಸ ನಿರ್ವಹಿಸಲಿದ್ದಾರೆ.

ಬೆಲ್ಜಿಯಂ ಪ್ರಧಾನಿ ಅಲೆಕ್ಸಾಂಡರ್‌ ಡಿ ಕ್ರೂ ಅವರನ್ನು ಬ್ರುಸೆಲ್ಸ್‌ನಲ್ಲಿ ಭೇಟಿಯಾಗಿ ಕ್ಯಾಸ್ಟೆಕ್ಸ್‌ ಹಿಂತಿರುಗಿ‌ದ್ದರು. ಸೋಮವಾರ ಅವರ ಮಗಳಿಗೆ ಸೋಂಕು ದೃಢಪಟ್ಟಿತ್ತು. ಆ ಬಳಿಕ ಕ್ಯಾಸೆಕ್ಸ್‌ ಅವರೂ ಎರಡು ಪರೀಕ್ಷೆಗಳನ್ನು ಮಾಡಿಸಿಕೊಂಡಿದ್ದು ಸೋಂಕು ದೃಢಪಟ್ಟಿದೆ ಎಂದು ಪ್ರಧಾನಿಯವರ ಕಚೇರಿ ತಿಳಿಸಿದೆ.

ಫ್ರಾನ್ಸ್‌ನ ಶೇಕಡಾ 75ರಷ್ಟು ಜನರು ಕೋವಿಡ್‌ ಲಸಿಕೆ ಪಡೆದುಕೊಂಡಿದ್ದಾರೆ. ಇತ್ತೀಚಿನ ವಾರಗಳಲ್ಲಿ ಇಲ್ಲಿ ಕೊರೊನಾ ಸೋಂಕು ಪ್ರಕರಣಗಳು ತ್ವರಿತಗತಿಯಲ್ಲಿ ಏರಿಕೆಯಾಗಿದೆ. ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಮತ್ತು ಸಾವಿನ ಪ್ರಮಾಣದಲ್ಲೂ ಏರಿಕೆಯಾಗಿದೆ.

ಫ್ರಾನ್ಸ್‌ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರಿಗೆ ಡಿಸೆಂಬರ್‌ನಲ್ಲಿ ಸೋಂಕು ತಗುಲಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT