ಭಾನುವಾರ, ಸೆಪ್ಟೆಂಬರ್ 19, 2021
30 °C

ಬ್ಲಿಂಕನ್‌ ಭೇಟಿಯಾದ ವಿದೇಶಾಂಗ ಕಾರ್ಯದರ್ಶಿ ಶೃಂಗ್ಲಾ; ದ್ವಿಪಕ್ಷೀಯ ಒಪ್ಪಂದ ಚರ್ಚೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶೃಂಗ್ಲಾ ಅವರು ಗುರುವಾರ ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಆ್ಯಂಟನಿ ಬ್ಲಿಂಕನ್‌ ಮತ್ತು ಉಪ ಕಾರ್ಯದರ್ಶಿ ವೆಂಡೈ ಶೆರ್ಮನ್‌ ಸೇರಿದಂತೆ ಜೋ ಬೈಡನ್ ಆಡಳಿತದ ಪ್ರಮುಖ ಅಧಿಕಾರಿಗಳನ್ನು ಭೇಟಿಯಾಗಿ, ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಒಪ್ಪಂದ ಕುರಿತು ಮಾತುಕತೆ ನಡೆಸಿದ್ದಾರೆ.

ಇದು, ಆ.31ರಂದು ಅಫ್ಗಾನಿಸ್ತಾನದಿಂದ ಅಮೆರಿಕ ತನ್ನ ಸೈನಿಕರನ್ನು ವಾಪಸ್ ಕರೆಸಿಕೊಂಡ ನಂತರ, ಉಭಯ ದೇಶಗಳ ಅಧಿಕಾರಿಗಳ ನಡುವೆ ನಡೆಯುತ್ತಿರುವ ಉನ್ನತ ಮಟ್ಟದ ಮೊದಲ ಚರ್ಚೆಯಾಗಿದೆ.

ನ್ಯೂಯಾರ್ಕ್‌ನಿಂದ ಇಲ್ಲಿಗೆ ಬಂದ ಹರ್ಷವರ್ಧನ ಶೃಂಗ್ಲಾ ಅವರು, ಗುರುವಾರ ಬ್ಲಿಂಕನ್ ಅವರನ್ನು ಭೇಟಿಯಾದರು.

‘ಉಭಯ ದೇಶಗಳ ನಾಯಕರ ನಡುವೆ ದ್ವಿಪಕ್ಷೀಯ ಒಪ್ಪಂದಗಳ ಜೊತೆಗೆ,  ಅಫ್ಗಾನಿಸ್ತಾನದ ಪ್ರಸ್ತುತ ಪರಿಸ್ಥಿತಿ ಕುರಿತು ಚರ್ಚೆ ನಡೆಯಿತು‘ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗಾಚಿ ಅವರು ಸಭೆಯ ನಂತರ ಟ್ವೀಟ್‌ ಮಾಡಿದ್ದಾರೆ. ಇದೇ ದಿನ ಶೃಂಗ್ಲಾ ಮತ್ತು ಅಮೆರಿಕ ಸರ್ಕಾರದ ಉಪ ಕಾರ್ಯದರ್ಶಿ ಶೆರ್ಮನ್ ನಡುವೆ ಸರಣಿ ಸಭೆಗಳು ನಡೆದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು