ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ–20 ಶೃಂಗಸಭೆ | ದ್ವಿಪಕ್ಷೀಯ ಬಾಂಧವ್ಯ; ಮೋದಿ– ಬೈಡನ್‌ ಚರ್ಚೆ

Last Updated 15 ನವೆಂಬರ್ 2022, 12:54 IST
ಅಕ್ಷರ ಗಾತ್ರ

ಬಾಲಿ (ಇಂಡೊನೇಷ್ಯಾ): ಜಿ–20 ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರೊಂದಿಗೆ ಮಾತುಕತೆ ನಡೆಸಿದ್ದು, ವಿವಿಧ ಕ್ಷೇತ್ರಗಳಲ್ಲಿ ಉಭಯ ದೇಶಗಳ ಪಾಲುದಾರಿಕೆ, ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಿದರು.

‘ನವೀನ ತಂತ್ರಜ್ಞಾನ, ಕೃತಕಬುದ್ಧಿಮತ್ತೆ ಕ್ಷೇತ್ರಗಳಲ್ಲಿನ ಪಾಲುದಾರಿಕೆ. ವ್ಯೂಹಾತ್ಮಕವಾಗಿ ಮುಖ್ಯವಾಗಿರುವ ಕ್ವಾಡ್‌ ಹಾಗೂ ಐ2ಯು2 (ಇಂಡಿಯಾ, ಇಸ್ರೇಲ್, ಯುಎಎಸ್‌ ಹಾಗೂ ಯುಎಇ) ಗುಂಪುಗಳ ಕಾರ್ಯನಿರ್ವಹಣೆಯಲ್ಲಿ ಭಾರತ ಮತ್ತು ಅಮೆರಿಕ ನೀಡುತ್ತಿರುವ ಸಹಕಾರದ ಬಗ್ಗೆ ಉಭಯ ನಾಯಕರು ತೃಪ್ತಿ ವ್ಯಕ್ತಪಡಿಸಿದರು’ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಚರ್ಚೆ: ಶೃಂಗಸಭೆಯಲ್ಲಿ ಪಾಲ್ಗೊಂಡಿರುವ ಫ್ರಾನ್ಸ್‌ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರಾನ್ ಅವರೊಂದಿಗೂ ಪ್ರಧಾನಿ ಮೋದಿ ಮಾತುಕತೆ ನಡೆಸಿದರು ಎಂದು ಪ್ರಧಾನ ಮಂತ್ರಿಗಳ ಕಚೇರಿ (ಪಿಎಂಒ) ಟ್ವೀಟ್‌ ಮಾಡಿದೆ.

ಸುನಕ್‌–ಮೋದಿ ಮಾತುಕತೆ: ಬ್ರಿಟನ್‌ ಪ್ರಧಾನಿ ರಿಷಿ ಸುನಕ್‌ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿ, ದ್ವಿಪಕ್ಷೀಯ ಸಂಬಂಧ ವೃದ್ಧಿ ಕುರಿತು ಚರ್ಚಿಸಿದರು ಎಂದು ಪಿಎಂಒ ತಿಳಿಸಿದೆ.

ಸುನಕ್‌ ಅವರು ಬ್ರಿಟನ್‌ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಉಭಯ ನಾಯಕರು ಇದೇ ಮೊದಲ ಬಾರಿಗೆ ಮುಖಾಮುಖಿಯಾಗಿದ್ದಾರೆ.

ಮೋದಿ ಅವರು, ಇಂಡೊನೇಷ್ಯಾ ಅಧ್ಯಕ್ಷ ಜೋಕೊ ವಿಡೊಡೊ ಅವರೊಂದಿಗೆ ಬುಧವಾರ ಸಭೆ ನಡೆಸಲಿದ್ದಾರೆ ಎಂದೂ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT