ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ20 ಶೃಂಗಸಭೆ ‘ಫಲಪ್ರದ‘: ಪ್ರಧಾನಿ ನರೇಂದ್ರ ಮೋದಿ

Last Updated 1 ನವೆಂಬರ್ 2021, 5:46 IST
ಅಕ್ಷರ ಗಾತ್ರ

ರೋಮ್‌: ಇಲ್ಲಿ ಭಾನುವಾರ ಮುಕ್ತಾಯಗೊಂಡ ಜಿ 20 ರಾಷ್ಟ್ರಗಳ ಶೃಂಗಸಭೆಯು ಫಲಪ್ರದವಾಗಿದೆ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಭೆಯಲ್ಲಿ ಪಾಲ್ಗೊಂಡಿದ್ದ ವಿಶ್ವದ ನಾಯಕರು ‘ಜಾಗತಿಕ ಮಟ್ಟದಲ್ಲಿ ಸಾಂಕ್ರಾಮಿಕದ ವಿರುದ್ಧದ ಹೋರಾಟ, ಆರೋಗ್ಯ ಕ್ಷೇತ್ರದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ, ಆರ್ಥಿಕ ಸಹಕಾರ ಹೆಚ್ಚಳ ಮತ್ತು ನೂತನ ಆವಿಷ್ಕಾರಗಳತ್ತ ಗಮನ ಹರಿಸುವ ಕುರಿತು ವಿಸ್ತೃತವಾದ ಚರ್ಚೆ ನಡೆಸಿದ್ದಾರೆ ಎಂದು ಹೇಳಿದರು.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ‘ರೋಮ್‌ನಲ್ಲಿ ನಡೆದ ಜಿ20 ಸಮಿತಿ ಶೃಂಗಸಭೆ ಫಲಪ್ರದವಾಗಿದೆ. ಈ ಶೃಂಗಸಭೆಯ ನಂತರ ನಾವು ಗ್ಲಾಸ್ಗೊಗೆ ಹೊರಟಿದ್ದೇವೆ. ಶೃಂಗಸಭೆಯ ಸಮಯದಲ್ಲಿ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಟ, ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಸುಧಾರಣೆ, ಆರ್ಥಿಕ ಸಹಕಾರವನ್ನು ಹೆಚ್ಚಿಸುವುದು ಮತ್ತು ಸಂಶೋಧನೆ, ಆವಿಷ್ಕಾರದತ್ತ ಗಮನಹರಿಸುವುದು ಸೇರಿದಂತೆ ವಿವಿಧ ಜಾಗತಿಕ ಪ್ರಾಮುಖ್ಯತೆಯ ವಿಷಯಗಳ ಕುರಿತು ವಿಸ್ತೃತವಾದ ಚರ್ಚೆಗಳನ್ನು ನಡೆಸಿದ್ದೇವೆ‘ ಎಂದು ಹೇಳಿದ್ದಾರೆ.

ಜಿ20 ಸಮಿತಿಯ ನಾಯಕರು ಎರಡು ದಿನಗಳ ಶೃಂಗಸಭೆಯಲ್ಲಿ ಪ್ರಕಟಿಸಲಾದ 'ರೋಮ್ ಘೋಷಣೆ'ಯನ್ನು ಅಳವಡಿಸಿಕೊಳ್ಳಲು ಒಪ್ಪಿಗೆ ಸೂಚಿಸಿದರು. ಮಾತ್ರವಲ್ಲ, ‘ಕೋವಿಡ್-19‘ ವಿರುದ್ಧ ರೋಗನಿರೋಧಕ ಶಕ್ತಿ ಹೆಚ್ಚಿಸುವುದರಿಂದ ಜಾಗತಿಕವಾಗಿ ಒಳಿತಾಗುತ್ತದೆ ಎಂದು ಒಪ್ಪಿಕೊಳ್ಳುವ ಮೂಲಕ ಆರೋಗ್ಯ ಕ್ಷೇತ್ರದಲ್ಲಿನ ಬೆಳವಣಿಗೆಗಳ ಕುರಿತು ಪರಿಣಾಮಕಾರಿ ಸಂದೇಶವನ್ನು ನೀಡಿದವು.

ಇಂಧನ ಮತ್ತು ಹವಾಮಾನ ಈ ಎರಡೂ ವಿಷಯಗಳ ಬಗ್ಗೆ ಜಿ20 ಶೃಂಗಸಭೆಯಲ್ಲಿ ಹೆಚ್ಚು ಚರ್ಚೆ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT