ಭಾನುವಾರ, ಡಿಸೆಂಬರ್ 4, 2022
21 °C

ನ್ಯೂಯಾರ್ಕ್‌ನಲ್ಲಿ ಮಹಾತ್ಮ ಗಾಂಧಿ ಪ್ರತಿಮೆ ಧ್ವಂಸ

ಪಿಟಿಐ Updated:

ಅಕ್ಷರ ಗಾತ್ರ : | |

ನ್ಯೂಯಾರ್ಕ್‌: ಇಲ್ಲಿನ ಹಿಂದೂ ದೇವಾಲಯದ ಸಮೀಪ ಇರುವ ಮಹಾತ್ಮ ಗಾಂಧೀಜಿ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸಗೊಳಿಸಿರುವ ಘಟನೆ ನಡೆದಿದೆ. ಈ ಮೂಲಕ ಒಂದೇ ತಿಂಗಳಲ್ಲಿ ಎರಡು ಬಾರಿ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಮಾಧ್ಯಮವೊಂದು ಶುಕ್ರವಾರ ವರದಿ ಮಾಡಿವೆ.

‘ಮಂಗಳವಾರ ವ್ಯಕ್ತಿಯೊಬ್ಬ ಗಾಂಧಿ ಪ್ರತಿಮೆಯನ್ನು ಸುತ್ತಿಗೆಯಿಂದ ಹೊಡೆದು ಉರುಳಿಸಿದ್ದಾನೆ. ಇದಾದ ಒಂದು ನಿಮಿಷದ ಬಳಿಕ ಆರು ಜನರ ಗುಂಪು ಸ್ಥಳಕ್ಕೆ ಧಾವಿಸಿ ಪ್ರತಿಮೆಯನ್ನು ಮತ್ತಷ್ಟು ವಿರೂಪಗೊಳಿಸಿರುವುದು ಕ್ಯಾಮೆರಾದಲ್ಲಿ ಸೆರೆಯಾಗಿದೆ’ ಎಂದು ಸಿಬಿಎಸ್‌ ನ್ಯೂಸ್‌ ಡಾಕ್‌ ಕಾಂ ತಿಳಿಸಿದೆ.

ಎರಡು ವಾರಗಳ ಹಿಂದೆಯೂ ಇದೇ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿತ್ತು ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ಘಟನೆಗೆ ನ್ಯೂಯಾರ್ಕ್‌ನ ಭಾರತೀಯ ರಾಯಭಾರಿ ಕಚೇರಿ ಖಂಡನೆ ವ್ಯಕ್ತಪಡಿಸಿದೆ. ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಅಮೆರಿಕದ ಅಧಿಕಾರಿಗಳಿಗೆ ಮನವಿ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು