ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜರ್ಮನಿಯಲ್ಲೂ ಕೋವಿಡ್‌ ಪ್ರಮಾಣ ಹೆಚ್ಚಳ

Last Updated 23 ಅಕ್ಟೋಬರ್ 2021, 11:37 IST
ಅಕ್ಷರ ಗಾತ್ರ

ಬರ್ಲಿನ್‌: ಜರ್ಮನಿಯಲ್ಲಿ ಮೇ ತಿಂಗಳ ಮಧ್ಯಭಾಗದ ನಂತರ ಇದೇ ಮೊದಲ ಬಾರಿಗೆ ಶನಿವಾರ ಕೋವಿಡ್‌ ಸೋಂಕಿನ ಪ್ರಕರಣಗಳು ಹೆಚ್ಚಾಗಿದ್ದು, ಏಳು ದಿನಗಳಿಂದ ಒಂದು ಲಕ್ಷಕ್ಕೆ 100 ಪ್ರಕರಣಗಳು ಪತ್ತೆಯಾಗುವ ಹಂತ ತಲುಪಿದೆ.

‘ಕಳೆದ ಮೇ ತಿಂಗಳಲ್ಲಿ ಕಟ್ಟುನಿಟ್ಟಿನ ಲಾಕ್‌ಡೌನ್ ಜಾರಿಗೊಳಿಸಲು ಇದನ್ನೇ ಮಾನದಂಡವನ್ನಾಗಿ ಮಾಡಿಕೊಳ್ಳಲಾಗಿತ್ತು. ಆದರೆ ಈಗ ಜನರಿಗೆ ಲಸಿಕೆ ನೀಡಿರುವುದರಿಂದ, ಪರಿಸ್ಥಿತಿಯನ್ನು ಸುಲಭವಾಗಿ ನಿಭಾಯಿಸಬಹುದು ಎಂದು ಆರೋಗ್ಯ ಸಚಿವ ಜೆನ್ಸ್ ಸ್ಪಾನ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಆದರೂ, ಮಾಸ್ಕ್ ಧರಿಸುವುದು ಸೇರಿದಂತೆ ಹಲವು ಕೋವಿಡ್ ನಿರ್ಬಂಧಗಳನ್ನು ಮುಂದಿನ ಬೇಸಿಗೆಯವರೆಗೂ ಮುಂದುವರಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಕಳೆದ ಏಳು ದಿನಗಳಿಂದ ನಿತ್ಯ 1 ಲಕ್ಷ ಪರೀಕ್ಷೆಯಲ್ಲಿ 95 ರಿಂದ 100 ಪ್ರಕರಣಗಳು ವರದಿಯಾಗುತ್ತಿವೆ. ಹೀಗಾಗಿ ಶನಿವಾರ ಒಂದೇ ದಿನ15,145 ಹೊಸ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿ ಒಟ್ಟು ಮೃತರ ಸಂಖ್ಯೆ 95,077ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT