ಜರ್ಮನಿ: ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ

ಬರ್ಲಿನ್: ಜರ್ಮನಿಯಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಮಾಣವು ಸೋಮವಾರ ದಾಖಲೆಯ ಮಟ್ಟಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
‘ದೇಶದಲ್ಲಿ ಲಸಿಕಾ ಅಭಿಯಾನವು ನಿಧಾನಗತಿಯಲ್ಲಿದ್ದು, ಸಾಂಕ್ರಾಮಿಕ ರೋಗ ಉಲ್ಬಣಕ್ಕೆ ಕಾರಣವಾಗಿದೆ. ಕಳೆದ ಏಳು ದಿನಗಳಲ್ಲಿ ಅವಧಿಯಲ್ಲಿ ಸೋಂಕಿನ ಪ್ರಮಾಣವು ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿದೆ’ ಎಂದು ರಾಷ್ಟ್ರೀಯ ರೋಗನಿಯಂತ್ರಣ ಕೇಂದ್ರವು ತಿಳಿಸಿದೆ.
ಕಳೆದ 24 ಗಂಟೆಗಳಲ್ಲಿ 15,513 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 33 ಮಂದಿ ಸಾವಿಗೀಡಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 96,558ಕ್ಕೆ ತಲುಪಿದೆ ಎಂದು ಕೇಂದ್ರವು ಮಾಹಿತಿ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.