ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜರ್ಮನಿ: ಕೊರೊನಾ ಸೋಂಕು ಹೆಚ್ಚಳ, ಓಮೈಕ್ರಾನ್‌ನ ‘ಬಿಎ.2’ ತಳಿ ಕಾರಣ

Last Updated 12 ಮಾರ್ಚ್ 2022, 12:55 IST
ಅಕ್ಷರ ಗಾತ್ರ

ಬರ್ಲಿನ್: ದೇಶದಲ್ಲಿ ಕೊರೊನಾ ವೈರಸ್‌ನ ರೂಪಾಂತರಿ ಓಮೈಕ್ರಾನ್‌ನ ‘ಬಿಎ.2’ ತಳಿ ಸೋಂಕಿನ ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಶುಕ್ರವಾರ ಒಂದೇ ದಿನ 2.5 ಲಕ್ಷಕ್ಕಿಂತ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, 249 ಮಂದಿ ಮೃತಪಟ್ಟಿದ್ದಾರೆ.

ಅಲ್ಲದೆ, ಕಳೆದೊಂದು ವಾರದಿಂದ ಪ್ರತಿ 1 ಲಕ್ಷ ಮಂದಿಯಲ್ಲಿ 1,400 ಮಂದಿಗೆ ಹೊಸದಾಗಿ ಸೋಂಕು ವ್ಯಾಪಿಸುತ್ತಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಸೋಂಕು ಪ್ರಸರಣ ನಿಯಂತ್ರಣಕ್ಕಾಗಿ ದೇಶದಲ್ಲಿ ಹೇರಲಾಗಿರುವ ನಿರ್ಬಂಧಗಳನ್ನು ಸಡಿಲಗೊಳಿಸಲಾಗುತ್ತಿದೆ. ಅಲ್ಲದೆ ಮಾರ್ಚ್ 20ರಂದು ಬಹುತೇಕ ನಿರ್ಬಂಧಗಳನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ.

ಈ ನಡುವೆ ದೇಶದ ಪ್ರಜೆಗಳನ್ನು ಉದ್ದೇಶಿಸಿ ಮಾತನಾಡಿರುವ ಆರೋಗ್ಯ ಸಚಿವ ಕಾರ್ಲ್ ಲಾಟರ್‌ಬಾಚ್ ಅವರು, ‘ಕೋವಿಡ್‌–19 ಪಿಡುಗು ಅಂತ್ಯವಾಗಿದೆ ಎಂದು ಭಾವಿಸಿ, ಯಾರೂ ಮೈಮರೆಯಬಾರದು’ ಎಂದು ಮನವಿ ಮಾಡಿದ್ದಾರೆ.

‘ದೇಶದಲ್ಲಿ ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಪ್ರತಿ ದಿನ 200 ರಿಂದ 250 ಮಂದಿ ಸೋಂಕಿನಿಂದಾಗಿ ಸಾವನ್ನಪ್ಪುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಏರಿಕೆಯಾಗುವ ಭೀತಿಯಿದೆ. ಹೀಗಾಗಿ ದೇಶದ ಪರಿಸ್ಥಿತಿ ಈಗ ಗಂಭೀರವಾಗಿದೆ’ ಎಂದೂ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT