ಶನಿವಾರ, ಜನವರಿ 29, 2022
17 °C

ಐಎಂಎಫ್‌ನ ಉನ್ನತ ಸ್ಥಾನಕ್ಕೆ ಬಡ್ತಿ ಪಡೆದ ಮೈಸೂರಿನ ಗೀತಾ ಗೋಪಿನಾಥ್‌

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಉಪ ವ್ಯವಸ್ಥಾಪಕ ನಿರ್ದೇಶಕಿಯಾಗಿ ಬಡ್ತಿ ಪಡೆದಿದ್ದಾರೆ. 

ಐಎಂಎಫ್‌ನ ಉಪ ವ್ಯವಸ್ಥಾಪಕ ನಿರ್ದೇಶಕರಾಗಿರುವ ಜೆಫ್ರಿ ಒಕಾಮೊಟೊ ಮುಂದಿನ ವರ್ಷದ ಮೊದಲ ತಿಂಗಳಲ್ಲಿ ನಿವೃತ್ತರಾಗುತ್ತಿದ್ದಾರೆ. ಆ ಹಿನ್ನೆಲೆಯಲ್ಲಿ ಗೀತಾ ಗೋಪಿನಾಥ್‌ ಅವರಿಗೆ ಉನ್ನತ ಹುದ್ದೆ ನೀಡಲಾಗಿದೆ ಎಂದು ಐಎಂಎಫ್‌ ತಿಳಿಸಿದೆ. 

ಈ ಕುರಿತು ಟ್ವೀಟ್‌ ಮೂಲಕ ತಿಳಿಸಿರುವ ಐಎಂಎಫ್‌ನ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲಿನಾ ಜಾರ್ಜೀವಾ, ‘ಜೆಫ್ರಿ ಮತ್ತು ಗೀತಾ ಉತ್ತಮ ಸಹೋದ್ಯೋಗಿಗಳು. ಜೆಫ್ರಿ ತೊರೆಯುತ್ತಿರುವ ವಿಚಾರ ನನಗೆ ಬೇಸರ ತಂದಿದೆ. ಆದರೆ, ಗೀತಾ ಹೊಸ ಜವಾಬ್ದಾರಿ ವಹಿಸಿಕೊಳ್ಳುತ್ತಿರುವುದರಿಂದ ನನಗೆ ಸಂತಸವಾಗಿದೆ‘ ಎಂದು ತಿಳಿಸಿದ್ದಾರೆ. 

ಮೈಸೂರಿನಲ್ಲಿ ಜನಿಸಿದ ಗೀತಾ ಅವರು 2019ರ ಜನವರಿಯಲ್ಲಿ ಐಎಂಎಫ್‌ನಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕೆಲಸ ಆರಂಭಿಸಿದ್ದರು. ಅದಕ್ಕೂ ಮೊದಲು ಅವರು ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಿದ್ದಾರೆ. 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು