ಮಂಗಳವಾರ, ಅಕ್ಟೋಬರ್ 20, 2020
22 °C

Covid-19 World update: ಜಗತ್ತಿನಾದ್ಯಂತ 2.99 ಕೋಟಿಗೂ ಹೆಚ್ಚು ಮಂದಿ ಗುಣಮುಖ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Coronavirus

ವಾಷಿಂಗ್ಟನ್: ಜಗತ್ತಿನಾದ್ಯಂತ ನಾಲ್ಕು ಕೋಟಿಗೂ ಅಧಿಕ ಜನರು ಕೋವಿಡ್-19 ಸೋಂಕಿಗೆ ಒಳಗಾಗಿದ್ದರೆ, 11.16 ಲಕ್ಷಕ್ಕೂ ಹೆಚ್ಚು ಜನರು ಮೃತಪಟ್ಟಿರುವುದು ವರ್ಡೊ ಮೀಟರ್‌ ವೆಬ್‌ಸೈಟ್‌ನಿಂದ ತಿಳಿದು ಬಂದಿದೆ.

ಈವರೆಗೆ ಜಗತ್ತಿನಾದ್ಯಂತ 2.99 ಕೋಟಿಗೂ ಹೆಚ್ಚು ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 89.88 ಲಕ್ಷ ಕೊರೊನಾ ಸೋಂಕು ಪ್ರಕರಣಗಳು ಸಕ್ರಿಯವಾಗಿವೆ.

ನೇಪಾಳದಲ್ಲಿ ಒಟ್ಟು ಕೋವಿಡ್‌–19 ದೃಢಪಟ್ಟ ಪ್ರಕರಣಗಳ ಸಂಖ್ಯೆ 1,32,246ಕ್ಕೆ ಏರಿಕೆಯಾಗಿದೆ, ಕೆಳದ 24 ಗಂಟೆಗಳಲ್ಲಿ 2,942 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ 12 ಮಂದಿ ಸಾವಿಗೀಡಾಗಿದ್ದಾರೆ. ಈವರೆಗೂ 92,166 ಮಂದಿ ಗುಣಮುಖರಾಗಿದ್ದಾರೆ.

ಸೋಂಕು ಪ್ರಕರಣಗಳ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಅಮೆರಿಕದಲ್ಲಿ ಒಟ್ಟು 83,46,163 ಜನರಿಗೆ ಕೋವಿಡ್-19 ದೃಢಪಟ್ಟಿದೆ. ಈವರೆಗೂ 2,24,296 ಮಂದಿ ಸಾವಿಗೀಡಾಗಿದ್ದಾರೆ. 54,32,663 ಜನರು ಈವರೆಗೆ ಚೇತರಿಸಿಕೊಂಡಿದ್ದಾರೆ.

ಸೋಂಕು ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ 75,21,674 ಪ್ರಕರಣಗಳು, ಬ್ರೆಜಿಲ್‌ನಲ್ಲಿ 52,24,362, ರಷ್ಯಾದಲ್ಲಿ 13,99,334, ಕೊಲಂಬಿಯಾದಲ್ಲಿ 9,52,371, ಮೆಕ್ಸಿಕೊದಲ್ಲಿ 8,47,108 ಹಾಗೂ  ಇಂಗ್ಲೆಂಡ್‌ನಲ್ಲಿ 7,05,428 ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ.

ವಿಶ್ವದಾದ್ಯಂತ ಒಂದೇ ದಿನ 4 ಲಕ್ಷಕ್ಕೂ ಹೆಚ್ಚು ಮಂದಿಗೆ (ಶುಕ್ರವಾರ ರಾತ್ರಿ ವೇಳೆಗೆ) ಕೊರೊನಾ ವೈರಸ್ ಸೋಂಕು ತಗುಲಿದೆ ಎಂದು ರಾಯಿಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ. ದಿನವೊಂದರ ಗರಿಷ್ಠ ಪ್ರಕರಣ ಇದಾಗಿದೆ.

ಮೊದಲ ಹಂತದ ಕೋವಿಡ್‌ ಅಲೆಯನ್ನು ತಡೆಯುವಲ್ಲಿ ಯಶಸ್ವಿಯಾಗಿದ್ದ ಯುರೋಪ್‌ನಲ್ಲಿ ಇದೀಗ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಕಳೆದ ವಾರ 1.40 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ.

ಯುರೋಪ್‌ನಲ್ಲಿ ಪ್ರತಿ ದಿನ ಭಾರತ, ಅಮೆರಿಕ ಹಾಗೂ ಬ್ರೆಜಿಲ್‌ಗಿಂತಲೂ ಹೆಚ್ಚು ಕೋವಿಡ್ ಪ್ರಕರಣಗಳು ಈಗ ಕಾಣಿಸಿಕೊಳ್ಳುತ್ತಿವೆ. ವಿಶ್ವದಾದ್ಯಂತ 100 ಮಂದಿಗೆ ಸೋಂಕು ತಗುಲಿದರೆ ಅದರಲ್ಲಿ 34 ಯುರೋಪಿಯನ್ ದೇಶಗಳದ್ದಾಗಿರುತ್ತವೆ. ಯುರೋಪ್‌ ದೇಶಗಳಲ್ಲೀಗ ಪ್ರತಿ 9 ದಿನಗಳಲ್ಲಿ 10 ಲಕ್ಷದಷ್ಟು ಪ್ರಕರಣಗಳು ವರದಿಯಾಗುತ್ತಿವೆ ಎಂದು ವರದಿ ಉಲ್ಲೇಖಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು