ಗುರುವಾರ , ಫೆಬ್ರವರಿ 25, 2021
28 °C

ಕಾಬೂಲ್‌: ಮಹಿಳಾ ನ್ಯಾಯಮೂರ್ತಿಗಳಿಗೆ ಗುಂಡಿಕ್ಕಿ ಹತ್ಯೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಕಾಬೂಲ್‌: ಅಫ್ಗಾನಿಸ್ತಾನದ ಕಾಬೂಲ್‌ನಲ್ಲಿ ಭಾನುವಾರ ನಡೆದ ದಾಳಿಯಲ್ಲಿ ಸುಪ್ರೀಂಕೋರ್ಟ್‌ನ ಇಬ್ಬರು ಮಹಿಳಾ ನ್ಯಾಯಮೂರ್ತಿಗಳನ್ನು ಬಂದೂಕುಧಾರಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಇತ್ತೀಚೆಗೆ ಅಮೆರಿಕವು ಅಫ್ಗಾನಿಸ್ತಾನದಲ್ಲಿ ತನ್ನ ಸೈನಿಕರ ಸಂಖ್ಯೆಯನ್ನು 2,500ಕ್ಕೆ ಇಳಿಸುವುದಾಗಿ ಹೇಳಿತ್ತು. ಇದರ ಬೆನ್ನಲ್ಲೇ ಸುಪ್ರೀಂಕೋರ್ಟ್‌ನ ಮಹಿಳಾ ನ್ಯಾಯಮೂರ್ತಿಗಳನ್ನು ಹತ್ಯೆಗೈಯಲಾಗಿದೆ.

‘ನ್ಯಾಯಾಲಯದ ಕಾರಿನಲ್ಲಿ ಮಹಿಳಾ ನ್ಯಾಯಮೂರ್ತಿಗಳು ಕಚೇರಿಗೆ ಬರುತ್ತಿದ್ದಾಗ ಈ ದಾಳಿ ನಡೆದಿದೆ. ಇದರಿಂದಾಗಿ ನಾವು ಇಬ್ಬರು ನ್ಯಾಯಮೂರ್ತಿಗಳನ್ನು ಕಳೆದುಕೊಂಡಿದ್ದೇವೆ. ಈ ದಾಳಿಯಲ್ಲಿ ಕಾರು ಚಾಲಕನಿಗೆ ಗಾಯಗಳಾಗಿವೆ’ ಎಂದು ಸುಪ್ರೀಂಕೋರ್ಟ್‌ ವಕ್ತಾರ ಅಹಮದ್‌ ಫಹೀಮ್‌ ಖವೀಮ್ ಮಾಹಿತಿ ನೀಡಿದರು.

ಅಲ್ಲಿನ ಸರ್ಕಾರ ಮತ್ತು ತಾಲಿಬಾನ್‌ ನಡುವೆ ಶಾಂತಿ ಮಾತುಕತೆ ನಡೆಯುತ್ತಿದೆ. ಆದರೂ ಕೆಲವು ತಿಂಗಳಿನಿಂದ ಅಫ್ಗಾನಿಸ್ತಾನದಲ್ಲಿ ಹಿಂಸಾತ್ಮಕ ದಾಳಿಗಳು ಹೆಚ್ಚಾಗಿವೆ. ವಿಶೇಷವಾಗಿ ಕಾಬೂಲ್‌ನಲ್ಲಿ ಉನ್ನತ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗುತ್ತಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು