ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಅಪರಿಚಿತ ವ್ಯಕ್ತಿಗಳಿಂದ ಗುಂಡಿನ ದಾಳಿ: ನಾಲ್ವರ ಸಾವು

Last Updated 16 ಜುಲೈ 2022, 12:17 IST
ಅಕ್ಷರ ಗಾತ್ರ

ಪೇಶಾವರ: ‘ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದ್ವಿಚಕ್ರ ವಾಹನಗಳಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ನಾಲ್ವರನ್ನು ಹತ್ಯೆ ಮಾಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬ ಗುಲ್‌ ರೆಹಮಾನ್‌ ಎಂಬುವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಮೃತ ರೆಹಮಾನ್‌, ಲಕ್ಕಿ ಮಾರ್ವತ್‌ ಪೊಲೀಸ್‌ ಠಾಣೆಯಲ್ಲಿ ಕ್ಲರ್ಕ್‌ ಆಗಿ ಕೆಲಸ ಮಾಡುತ್ತಿದ್ದರು. ಆರೋಪಿ ಪರಾರಿಯಾಗಿದ್ದು, ಆತನ ಪತ್ತೆ ಕಾರ್ಯ ಆರಂಭಿಸಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

‘ಬಾರಾ ತಹಸಿಲ್‌ನ ಚೆಕ್‌ಪೋಸ್ಟ್‌ ಬಳಿ ನಡೆದ ಮತ್ತೊಂದು ಪ್ರಕರಣದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಮೂವರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ. ಇದರಲ್ಲಿ ಇಬ್ಬರು ಪೊಲೀಸರು ಸೇರಿದ್ದಾರೆ’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT