ಸೋಮವಾರ, ಮಾರ್ಚ್ 27, 2023
32 °C

ಇರಾನ್‌ನಲ್ಲಿ ಬಂದೂಕುಧಾರಿಗಳಿಂದ ಗುಂಡಿನ ದಾಳಿ: ಕನಿಷ್ಠ 15 ಮಂದಿ ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಇರಾನ್‌: ಬಂದೂಕುಧಾರಿಗಳು ಶಿಯಾ ಸಮುದಾಯದ ಪ್ರಮುಖ ಪ್ರಾರ್ಥನಾ ಮಂದಿರದಲ್ಲಿ ಗುಂಡಿನ ದಾಳಿ ನಡೆಸಿ ಕನಿಷ್ಠ 15 ಮಂದಿ ಸಾವನ್ನಪ್ಪಿರುವ ಘಟನೆ ದಕ್ಷಿಣ ನಗರವಾದ ಶಿರಾಜ್‌ ನಗರದಲ್ಲಿ ಬುಧವಾರ ನಡೆದಿದೆ.

ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಇಬ್ಬರು ಬಂದೂಕುಧಾರಿಗಳನ್ನು ಬಂಧಿಸಿಲಾಗಿದ್ದು,ಮೂರನೇಯವನು ತಪ್ಪಿಸಿಕೊಂಡು ಓಡಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಘಟನೆಯಲ್ಲಿ 40 ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಲಿದೆ ಎಂದು ಸ್ಥಳೀಯ ಇರ್ನಾ ಟಿವಿ ವರದಿ ಮಾಡಿದೆ.

ಸುನ್ನಿ ಉಗ್ರಗಾಮಿಗಳು ಈ ಹಿಂದೆ ದೇಶದ ಬಹುಸಂಖ್ಯಾತ ಶಿಯಾ ಸಮುದಾಯದ ಪವಿತ್ರ ಸ್ಥಳಗಳನ್ನು ಗುರಿಯಾಗಿಸಿಕೊಂಡಿದ್ದರು. ಒಂದು ತಿಂಗಳಿನಿಂದ ಇರಾನ್ನಲ್ಲಿ ಸರ್ಕಾರ ವಿರೋಧಿ ಪ್ರತಿಭಟನೆಗಳು ಹೆಚ್ಚಾಗಿವೆ. ಅದರ ಬೆನ್ನಲ್ಲೇ ಈ ದಾಳಿ ನಡೆದಿದೆ.

ನೈತಿಕ ಪೊಲೀಸರ  ಕಸ್ಟಡಿಯಲ್ಲಿದ್ದ 22 ವರ್ಷದ ಯುವತಿ ಮಹ್ಸಾ ಅಮಿನಿ ಸಾವು ಖಂಡಿಸಿ ಇರಾನ್‌ನಲ್ಲಿ ಪ್ರತಿಭಟನೆ ಕಳೆದ 40 ದಿನಗಳಿಂದ ತೀವ್ರಗೊಂಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು