ಶುಕ್ರವಾರ, ಸೆಪ್ಟೆಂಬರ್ 24, 2021
26 °C

ನೈಜೀರಿಯಾ: 73 ವಿದ್ಯಾರ್ಥಿಗಳ ಅಪಹರಣ

ಎಪಿ Updated:

ಅಕ್ಷರ ಗಾತ್ರ : | |

Prajavani

ಲಾಗೋಸ್‌(ನೈಜೀರಿಯಾ): ವಾಯವ್ಯ ನೈಜೀರಿಯಾದಲ್ಲೂ ಶಸ್ತ್ರಧಾರಿಗಳಾದ ದುಷ್ಕರ್ಮಿಗಳು ಶಾಲೆಯೊಂದರಿಂದ 73 ವಿದ್ಯಾರ್ಥಿಗಳನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮೊದಲು ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಒತ್ತೆಯಾಳುಗಳನ್ನು ಭಾರಿ ಮೊತ್ತದ ಹಣ ನೀಡಿ ಬಿಡುಗಡೆಗೊಳಿಸಿದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಯಾ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಿಂದ ವಿದ್ಯಾರ್ಥಿಗಳನ್ನು ಶಸ್ತ್ರಧಾರಿಗಳಾದ ಗುಂಪೊಂದು ಬುಧವಾರ ಅಪಹರಿಸಿದೆ. ಅಪಹರಣಕ್ಕೆ ಮೊದಲು ಅವರು ಗಾಳಿಯಲ್ಲಿ ಗುಂಡು ಹಾರಿಸಿದ್ದರು ಎಂದು ಸ್ಥಳೀಯ ನಿವಾಸಿಗಳು ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಬಿಡುಗಡೆಗಾಗಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ನೈಜೀರಿಯಾದಲ್ಲಿ ಡಿಸೆಂಬರ್‌ನಿಂದ ಈವರೆಗೆ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಪಹರಣಕ್ಕೊಳಗಾಗಿದ್ದಾರೆ. ಇವರಲ್ಲಿ ಹೆಚ್ಚಿನ ವಿದ್ಯಾರ್ಥಿಗಳನ್ನು ಬಿಡುಗಡೆಗೊಳಿಸಲಾಗಿತ್ತು. ಕೆಲ ವಿದ್ಯಾರ್ಥಿಗಳನ್ನು ದುಷ್ಕರ್ಮಿಗಳು ಹತ್ಯೆಗೈದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು