ಮಂಗಳವಾರ, ಸೆಪ್ಟೆಂಬರ್ 27, 2022
27 °C

ಪಾಕ್‌ನಲ್ಲಿ ಗುಂಡಿನ ದಾಳಿ: ನಾಲ್ವರ ಸಾವು

ಎಪಿ Updated:

ಅಕ್ಷರ ಗಾತ್ರ : | |

Prajavani

ಪೇಶಾವರ: ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನ ತೆಹ್ರೀಕ್‌ ಇ ಇನ್ಸಾಫ್‌ ಪಕ್ಷದಮುಖಂಡರೊಬ್ಬರನ್ನು ಗುರಿಯಾಗಿಸಿ ಬಂದೂಕುಧಾರಿಯೊಬ್ಬ ಇಲ್ಲಿ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಪೊಲೀಸ್‌ ಸೇರಿ ನಾಲ್ವರು ಮೃತಪಟ್ಟರು.

ಪಾಕಿಸ್ತಾನ ವಾಯವ್ಯ ಭಾಗದ ಖೈಬರ್‌ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಕೃತ್ಯ ನಡೆದಿದೆ. ಸ್ಥಳೀಯ ರಾಜಕೀಯ ಮುಖಂಡ ಮಲಿಕ್‌ ಲಿಕಾಯತ್‌ ಖಾನ್‌ ದಾಳಿಯಲ್ಲಿ ಗಾಯಗೊಂಡಿದ್ದಾರೆ. ಕೃತ್ಯದ ಹೊಣೆಯನ್ನು ಈವರೆಗೆ ಯಾವುದೇ ಸಂಘಟನೆ ಹೊತ್ತುಕೊಂಡಿಲ್ಲ.

ಮೃತರಲ್ಲಿ ಪಿಟಿಐ ಪಕ್ಷದ ಮುಖಂಡ ಹಾಗೂ ಅವರ ಸೋದರ ಸಂಬಂಧಿ ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು