ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೈಟಿ: ನೂತನ ಪ್ರಧಾನಿಯಾಗಿ ಹೆನ್ರಿ ಅಧಿಕಾರ ಸ್ವೀಕಾರ

Last Updated 21 ಜುಲೈ 2021, 5:23 IST
ಅಕ್ಷರ ಗಾತ್ರ

ಪೋರ್ಟ್‌–ಒ–ಪ್ರಿನ್ಸ್‌ (ಹೈಟಿ): ಹೈಟಿಯ ನೂತನ ಪ್ರಧಾನಿಯಾಗಿ ಏರಿಯಲ್ ಹೆನ್ರಿ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.

ವೃತ್ತಿಯಿಂದ ನರರೋಗ ಶಸ್ತ್ರಚಿಕಿತ್ಸಕರಾಗಿರುವ ಹೆನ್ರಿ, ಈ ಮೊದಲು ಸಂಪುಟ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿ ಅವರು, ‘ನಾವು ಮಾಡಬೇಕಾದ ಕಾರ್ಯಗಳು ಬಹಳ ಕಠಿಣ ಹಾಗೂ ಸಂಕೀರ್ಣವಾದವುಗಳಾಗಿವೆ. ಎಲ್ಲರೂ ಒಗ್ಗಟ್ಟಿನಿಂದ ಈ ಸವಾಲುಗಳನ್ನು ಎದುರಿಸೋಣ’ ಎಂದರು.

‘ಮಾತುಕತೆ, ಚರ್ಚೆಯಲ್ಲಿ ನನಗೆ ನಂಬಿಕೆ ಇದೆ. ಹೀಗಾಗಿ ಯಾವುದೇ ವಿಷಯ ಕುರಿತು ನಿರ್ಧಾರ ಕೈಗೊಳ್ಳುವ ಮೊದಲು ಒಮ್ಮತ ಮೂಡಿಸಿ, ಮುಂದುವರಿಯುವೆ’ ಎಂದೂ ಹೇಳಿದರು.

ಜೊವೆನೆಲ್‌ ಮೊಯಿಸ್‌ ಅವರ ಹತ್ಯೆ ಕುರಿತು ನಡೆಯುತ್ತಿರುವ ತನಿಖೆಗೆ ಮಿತ್ರ ರಾಷ್ಟ್ರಗಳ ಸಹಕಾರ ಕೋರುವೆ. ಈ ದುಷ್ಕೃತ್ಯಕ್ಕೆ ಕಾರಣರಾದವರಿಗೆ ಶಿಕ್ಷಿಸದೇ ಬಿಡುವುದಿಲ್ಲ ಎಂದರು.

ಅಧ್ಯಕ್ಷರಾಗಿದ್ದ ಜೊವೆನೆಲ್‌ ಮೊಯಿಸ್‌ ಅವರನ್ನು ಜುಲೈ 7ರಂದು ಮುಂಜಾನೆ ಅವರ ಮನೆಯಲ್ಲಿಯೇ ಸಶಸ್ತ್ರ ವ್ಯಕ್ತಿಗಳ ಗುಂಪು ಹತ್ಯೆ ಮಾಡಿತ್ತು. ನಂತರ ನಡೆದ ರಾಜಕೀಯ ಬೆಳವಣಿಗೆಗಳಲ್ಲಿ, ಕ್ಲಾಡ್‌ ಜೋಸೆಫ್ ಅವರು ಹಂಗಾಮಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT