ಬುಧವಾರ, ಸೆಪ್ಟೆಂಬರ್ 28, 2022
26 °C

ಸಂಚಾರ ನಿರ್ಬಂಧಗಳನ್ನು ಮುಂದುವರಿಸಿದ ಹೀಥ್ರೋ ವಿಮಾನ ನಿಲ್ದಾಣ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ಹೀಥ್ರೋ ವಿಮಾನ ನಿಲ್ದಾಣದ ಆಡಳಿತವು ವಿಮಾನಗಳು ಹಾಗೂ ಪ್ರಯಾಣಿಕರ ಮೇಲೆ ಹೇರಿದ್ದ ನಿರ್ಬಂಧಗಳನ್ನು ಅಕ್ಟೋಬರ್‌ 29ರವರೆಗೂ ಮುಂದುವರಿಸಿದೆ. 

ಹೀಥ್ರೋ ನಿಲ್ದಾಣದ ಆಡಳಿತವು ನಿಲ್ದಾಣದ ಮೂಲಕ ಬೇರೆಡೆಗೆ ನಿತ್ಯ ಪ್ರಯಾಣಿಸುವವರ ಸಂಖ್ಯೆಯನ್ನು 1 ಲಕ್ಷಕ್ಕೆ ಸೀಮಿತಗೊಳಿಸಿ ಜುಲೈನಲ್ಲಿ ಆದೇಶ ಹೊರಡಿಸಿತ್ತು. ಈ ನಿರ್ಬಂಧವು ಸೆಪ್ಟೆಂಬರ್‌ 11ಕ್ಕೆ ಕೊನೆಗೊಳ್ಳಬೇಕಿತ್ತು. ಇದನ್ನು ಅಕ್ಟೋಬರ್‌ ಅಂತ್ಯದವರೆಗೆ ಮುಂದುವರಿಸಲು ಸೋಮವಾರ ನಿರ್ಧರಿಸಲಾಗಿದೆ. 

ಸಿಬ್ಬಂದಿ ಕೊರತೆಯಿಂದಾಗಿ ಸೇವೆಯಲ್ಲಿ ವ್ಯತ್ಯಯವಾಗುವುದನ್ನು ತಪ್ಪಿಸಲು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

‘ಪ್ರಯಾಣಿಕರಿಗೆ ಗುಣಮಟ್ಟದ ಸೇವೆ ಒದಗಿಸುವುದು ನಮ್ಮ ಧ್ಯೇಯ. ಈ ನಿರ್ಬಂಧಗಳನ್ನು ಶೀಘ್ರವೇ ತೆರವುಗೊಳಿಸಲಾಗುತ್ತದೆ’ ಎಂದು ಹೀಥ್ರೋ ನಿಲ್ದಾಣದ ಮುಖ್ಯ ವಾಣಿಜ್ಯ ಅಧಿಕಾರಿ ರಾಸ್‌ ಬಾರ್ಕರ್‌ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು