ಬುಧವಾರ, ಆಗಸ್ಟ್ 17, 2022
25 °C

ನೇಪಾಳದಲ್ಲಿ ಭೂಕುಸಿತ: 9 ಮಂದಿ ಸಾವು, 22 ಮಂದಿ ನಾಪತ್ತೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕಠ್ಮಂಡು: ನೇಪಾಳದಲ್ಲಿ ಭಾರೀ ಮಳೆಯಿಂದಾಗಿ ಭಾನುವಾರ ಮುಂಜಾನೆ ಭೂ ಕುಸಿತ ಸಂಭವಿಸಿದ್ದು, 9 ಮಂದಿ ಮೃತಪಟ್ಟಿದ್ದಾರೆ.

ನೇಪಾಳದ ನಾಗಪುಜೆ, ಬ್ರಿಖಾರ್ಕ, ನೆವಾರ ಗ್ರಾಮಗಳಲ್ಲಿ ಭಾನುವಾರ ಬೆಳಿಗ್ಗೆ 2.30 ರ ಸುಮಾರಿಗೆ ಭೂ ಕುಸಿತ ಸಂಭವಿಸಿದೆ. ಇದರಲ್ಲಿ 9 ಜನರು ಸಾವನ್ನಪ್ಪಿದ್ದು, 22 ಮಂದಿ ನಾಪತ್ತೆಯಾಗಿದ್ದಾರೆ ಎಂದು ಮೈರಿಪಬ್ಲಿಕ ವರದಿ ಮಾಡಿದೆ.

‘ಘಟನಾ ಸ್ಥಳದಿಂದ ಏಳು ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ. ಗುಂಥಗ ಪ್ರಾಂತ್ಯದಲ್ಲಿ 22 ಮಂದಿ ನಾಪತ್ತೆಯಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಸಿಂಧುಪಾಲ್ಚೌಕ್‌ ಜಿಲ್ಲಾ ಪೊಲೀಸ್ ಕಚೇರಿಯ ಮುಖ್ಯಸ್ಥ ರಾಜನ್‌ ಅಧಿಕಾರಿ ಅವರು ತಿಳಿಸಿದರು. 

ನೇಪಾಳ ಸೇನೆ, ಪೊಲೀಸ್‌,ಸಶಸ್ತ್ರ ಪೊಲೀಸ್ ಪಡೆಯು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅವರು ಹೇಳಿದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು