ಸಾವೊ ಪೌಲ್: ಬ್ರೆಜಿಲ್‌ನ ಸಾವೊ ಪೌಲೊ ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಪರಿಸ್ಥಿತಿ ಎದುರಾಗಿದ್ದು, ಈಗಾಗಲೇ 36 ಮಂದಿ ಸಾವನ್ನಪ್ಪಿದ್ದಾರೆ. ಹಲವರು ನಾಪತ್ತೆಯಾಗಿದ್ದು, 50ಕ್ಕೂ ಹೆಚ್ಚು ಮನೆಗಳು ನೆಲಸಮವಾಗಿವೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಾವೊ ಸಬಾಸ್ಟಿಯೊ, ಉಬಾಟುಬಾ, ಇಲ್ಹಬೆಲಾ ಮತ್ತು ಬರ್ಟಿಯೊಗಾ ನಗರಗಳಲ್ಲಿ ಭಾರಿ ಪ್ರವಾಹದಿಂದ ಹಾನಿ ಉಂಟಾಗಿದೆ. ಇಲ್ಲಿ ಉತ್ಸವಗಳನ್ನು ರದ್ದುಪಡಿಸಲಾಗಿದೆ. ರಕ್ಷಣಾ ತಂಡಗಳು ಕಾಣೆಯಾದ, ಗಾಯಗೊಂಡ ಮತ್ತು ಅವಶೇಷಗಳಡಿಯಲ್ಲಿ ಸಿಲುಕಿದ ಜನರನ್ನು ಕಾಪಾಡುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಒಂದೇ ದಿನ 60 ಸೆಂ.ಮೀ.ಗೂ ಅಧಿಕ ಮಳೆ ಸುರಿದಿದ್ದು, ಬ್ರೆಜಿಲ್‌ನಲ್ಲಿ ಇದು ದಾಖಲೆಯ ಮಳೆ ಪ್ರಮಾಣವಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.