ಶನಿವಾರ, ಆಗಸ್ಟ್ 13, 2022
26 °C

ಪಾಕಿಸ್ತಾನ: ಭಾರಿ ಮಳೆ–ಗಾಳಿಗೆ 9 ಜನರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಾಳಿ ಮತ್ತು ಮಳೆ– ಸಾಂದರ್ಭಿಕ ಚಿತ್ರ

ಪೇಶಾವರ, ಪಾಕಿಸ್ತಾನ: ವಾಯುವ್ಯ ಪಾಕಿಸ್ತಾನದ ಖೈಬರ್ ಪಖ್ತುಂಕ್ವಾ ಪ್ರಾಂತ್ಯದಲ್ಲಿ ಭಾರಿ ಮಳೆ ಮತ್ತು ಬಿರುಗಾಳಿಯಿಂದಾಗಿ 9 ಮಂದಿ ಸಾವನ್ನಪ್ಪಿದ್ದು, 17 ಜನರು ಗಾಯಗೊಂಡಿದ್ದಾರೆ.

ಚಿತ್ರಾಲ್, ದಿರ್, ಮನ್ಸೆಹ್ರಾ ಮತ್ತು ಸ್ವಾತ್ ಸೇರಿದಂತೆ ಗುಡ್ಡಗಾಡು ಮತ್ತು ಪರ್ವತ ಪ್ರದೇಶಗಳ ಜಿಲ್ಲೆಗಳಲ್ಲಿ ಸುರಿದ ಭಾರಿ ಮತ್ತು ಅಪ್ಪಳಿಸಿದ ಬಿರುಗಾಳಿಗೆ ಸಾವು–ನೋವು ಸಂಭವಿಸಿವೆ. ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಪಿಡಿಎಂಎ) ಸೋಮವಾರ ತಿಳಿಸಿದೆ.

ಮಳೆ ಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರವು ಆಯಾ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು