ಗುರುವಾರ , ಆಗಸ್ಟ್ 11, 2022
27 °C

ಬ್ರಿಟನ್‌ | ಪ್ರತಿಭಟನೆ ಮುಂದುವರಿಸಿದ ಸಿಬ್ಬಂದಿ; ರೈಲು ಸೇವೆಯಲ್ಲಿ ವ್ಯತ್ಯಯ

ಎಪಿ Updated:

ಅಕ್ಷರ ಗಾತ್ರ : | |

Prajavani

ಲಂಡನ್‌: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈಲ್ವೆ ಸಿಬ್ಬಂದಿ ದೇಶದಾದ್ಯಂತ ನಡೆಸುತ್ತಿರುವ ಪ್ರತಿಭಟನೆ ಶನಿವಾರ ಮೂರನೇ ದಿನಕ್ಕೆ ಕಾಲಿಟ್ಟಿತು.

40,000 ಕ್ಲೀನರ್‌ಗಳು, ನಿರ್ವಹಣಾ ಸಿಬ್ಬಂದಿ, ನಿಲ್ದಾಣ ಸಿಬ್ಬಂದಿ ಪ್ರತಿಭಟಿಸುತ್ತಿರುವ ಪರಿಣಾಮ ಶನಿವಾರ ರೈಲುಗಳ ಸೇವೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿತ್ತು. ಕೆಲವೇ ಪ್ರಯಾಣಿಕ ರೈಲುಗಳು ಮಾತ್ರ ಸಂಚರಿಸಿದವು ಎಂದು ರೈಲ್ವೆ ಕಂಪನಿಗಳು ತಿಳಿಸಿವೆ.

ದೇಶದಲ್ಲಿ ಹಣದುಬ್ಬರ ನಾಲ್ಕು ದಶಕಗಳ ಗರಿಷ್ಠ ಮಟ್ಟಕ್ಕೆ ತಲುಪಿರುವ ಹಿನ್ನೆಲೆಯಲ್ಲಿ ವೇತನ ಹೆಚ್ಚಿಸಬೇಕೆಂದು ರೈಲು, ಜಲಸಾರಿಗೆ ಹಾಗೂ ರಸ್ತೆ ಸಾರಿಗೆ ಒಕ್ಕೂಟಗಳು ಆಗ್ರಹಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು