ಭಾನುವಾರ, ಮಾರ್ಚ್ 26, 2023
24 °C

ಹಿಮಾಚಲ ಪ್ರದೇಶ: 1 ಲೋಕಸಭೆ, 3 ವಿಧಾನಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಲೋಕಸಭೆ ಸೇರಿದಂತೆ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಜಯ ಸಾಧಿಸಿದೆ.

ಈ ಹಿಂದೆ ಬಿಜೆಪಿ ವಶದಲ್ಲಿದ್ದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪತ್ನಿ ಪ್ರತಿಭಾ ಸಿಂಗ್ ಗೆಲುವು ಸಾಧಿಸಿದ್ದಾರೆ.

ಬಿಜೆಪಿಯ ಖುಷಾಲ್ ಠಾಕೂರ್ ಅವರನ್ನು 7,490 ಮತಗಳ ಅಂತರದಿಂದ ಪ್ರತಿಭಾ ಸಿಂಗ್ ಸೋಲಿಸಿದ್ದಾರೆ.

ಚುನಾವಣಾ ಆಯೋಗವು ಪ್ರಕಟಿಸಿದ ಫಲಿತಾಂಶಗಳ ಪ್ರಕಾರ, ಕಾಂಗ್ರೆಸ್ ಪಕ್ಷವು ಫತೇಪುರ್ ಮತ್ತು ಅರ್ಕಿ ವಿಧಾನಸಭೆ ಕ್ಷೇತ್ರಗಳನ್ನು ಉಳಿಸಿಕೊಂಡಿದೆ. ಜುಬ್ಬಲ್- ಕೋಟ್‌ಖಾಯ್‌ ಕ್ಷೇತ್ರವನ್ನು ಬಿಜೆಪಿಯಿಂದ ಕಿತ್ತುಕೊಂಡಿದೆ.

ಜುಬ್ಬಲ್- ಕೋಟ್‌ಖಾಯ್‌ನಲ್ಲಿ ಠೇವಣಿ ಉಳಿಸಿಕೊಳ್ಳಲು ಬಿಜೆಪಿ ವಿಫಲವಾಗಿದೆ.

ಮಂಡಿಯಲ್ಲಿ ಪ್ರತಿಭಾ ಸಿಂಗ್ 3,69,565 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ 3,62,075 ಮತಗಳನ್ನು ಗಳಿಸುವಲ್ಲಿ ಸಫಲರಾಗಿದ್ದಾರೆ.

ಫತೇಪುರದಲ್ಲಿ ಕಾಂಗ್ರೆಸ್‌ನ ಭವಾನಿ ಸಿಂಗ್ ಪಠಾನಿಯಾ ಅವರು ಬಿಜೆಪಿಯ ಬಲದೇವ್ ಠಾಕೂರ್ ಅವರನ್ನು 5,789 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಅರ್ಕಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಸಂಜಯ್ ಅವರು ಬಿಜೆಪಿಯ ರತ್ತನ್ ಸಿಂಗ್ ಪಾಲ್ ಅವರನ್ನು 3,219 ಮತಗಳ ಅಂತರದಿಂದ ಪರಾಭವಗೊಳಿಸಿದ್ದಾರೆ.

ಜುಬ್ಬಲ್-ಕೋಟ್‌ಖಾಯ್‌ನಲ್ಲಿ ಕಾಂಗ್ರೆಸ್‌ನ ರೋಹಿತ್ ಠಾಕೂರ್ ಅವರು 6,293 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

'ಬಿಜೆಪಿಯ ಸೋಲಿಗೆ ನೈತಿಕ ಹೊತ್ತು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು' ಎಂದು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಕುಲದೀಪ್ ಸಿಂಗ್ ರಾಥೋಡ್ ಒತ್ತಾಯಿಸಿದ್ದಾರೆ.

ಮತ್ತೊಂದೆಡೆ, ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿದ್ದೇವೆ ಎಂದು ಮುಖ್ಯಮಂತ್ರಿ ಜೈ ರಾಮ್ ಠಾಕೂರ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು