ಬಲೂಚಿಸ್ತಾನ: ಪಾಕಿಸ್ತಾನದ ಖುಜ್ದಾರ್ ಜಿಲ್ಲೆಯ ವಾಧ್ ಮಾರುಕಟ್ಟೆಯಲ್ಲಿ ಉದ್ಯಮಿ ಅಶೋಕ್ ಕುಮಾರ್ ಎಂಬುವವರನ್ನು ಕಳೆದವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದ ಬಳಿಕ ಇದೀಗ ಬಲೂಚಿಸ್ತಾನ ಪ್ರಾಂತ್ಯದಲ್ಲಿರುವ ಹಿಂದೂ ವರ್ತಕರು ಮತ್ತು ಅಂಗಡಿ ಮಾಲೀಕರಿಗೆ ಅಪರಿಚಿತ ವ್ಯಕ್ತಿಗಳು ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ.

ಮಾರುಕಟ್ಟೆ ಮತ್ತು ರಾಷ್ಟ್ರೀಯ ಹೆದ್ದಾರಿಯಲ್ಲಿನ ಸೂಚನಾ ಫಲಕಗಳಲ್ಲಿ ಅಪರಿಚಿತರು ಶನಿವಾರ ಕರಪತ್ರಗಳನ್ನು ಅಂಟಿಸಿದ್ದಾರೆ. ಕರಪತ್ರದಲ್ಲಿ, ʼಮಹಿಳಾ ಗ್ರಾಹಕರು ತಮ್ಮ ಅಂಗಡಿಗಳಿಗೆ ಪ್ರವೇಶಿಸಲು ಅವಕಾಶ ನೀಡಿದರೆ, ಸ್ಥಳೀಯ ಹಿಂದೂ ವ್ಯಾಪಾರಿಗಳುಗಂಭೀರ ಪರಿಣಾಮಗಳನ್ನು ಎದುರಿಸಲಿದ್ದಾರೆʼ ಎಂದು ಬೆದರಿಕೆಯೊಡ್ಡಲಾಗಿದೆ ಎಂದುಪಾಕಿಸ್ತಾನದ ಕೆಲ ಪ್ರತಿಕೆಗಳಲ್ಲಿ ವರದಿಯಾಗಿದೆ.

ಅಶೋಕ್ ಕುಮಾರ್ ಹತ್ಯೆಯ ವಿರುದ್ಧಪಾಕಿಸ್ತಾನದ ವರ್ತಕರು ಪ್ರತಿಭಟನೆಗಳನ್ನು ನಡೆಸಿದ್ದರು.ಅದಾದನಂತರ ಪಟ್ಟಣದಲ್ಲಿ ಕರಪತ್ರಗಳನ್ನು ಅಂಟಿಸಲಾಗಿದೆ. ಇದನ್ನು ವಿರೋಧಿಸಿ ಹಾಗೂತನಿಖೆಯನ್ನು ಚುರುಕುಗೊಳಿಸುವಂತೆ ಆಗ್ರಹಿಸಿ ವರ್ತಕರ ಸಂಘದ ಸದಸ್ಯರು ಹಾಗೂ ಬಲೂಚಿಸ್ತಾನ ರಾಷ್ಟ್ರೀಯ ಪಕ್ಷ-ಮೆಂಗಲ್ (ಬಿಎನ್‌ಪಿ-ಎಂ) ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಶನಿವಾರವೇ ಪ್ರತಿಭಟನೆ ನಡೆಸಿದ್ದಾರೆ.

ಕ್ರಿಶ್ಚಿಯನ್ನರು, ಸಿಖ್ಖರು ಮತ್ತು ಹಿಂದೂಗಳು ಸೇರಿದಂತೆಪಾಕಿಸ್ತಾನದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ, ತಾರತಮ್ಯ ಮತ್ತು ಕಿರುಕುಳ ನಿರಂತರವಾಗಿ ಮುಂದುವರಿದಿದೆ. ಅಲ್ಪಸಂಖ್ಯಾತ ಸಮುದಾಯದವರ ಧಾರ್ಮಿಕ ಕೇಂದ್ರಗಳ ಮೇಲೆ ಆಗಾಗ್ಗೆ ದಾಳಿ ಆಗುತ್ತಿರುವುದರಿಂದ ಅವರ ಧಾರ್ಮಿಕ ಸ್ವಾತಂತ್ಯ್ರಕ್ಕೆ ಧಕ್ಕೆಯಾದಂತಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.