ಹಾಂಗ್‌ಕಾಂಗ್: ನಗರದ ಕೈಗಾರಿಕಾ ಪ್ರದೇಶವಾದ ಕೌಲೂನ್‌ನ ಗೋದಾಮಿನಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.
ಬೆಂಕಿಯ ಪರಿಣಾಮ ಕಟ್ಟಡದಿಂದ ದಟ್ಟ ಹೊಗೆ ಹೊರಬರುತ್ತಿರುವುದು ಕಂಡು ಬಂದಿದೆ. ಹೀಗಾಗಿ ಹತ್ತಿರದಲ್ಲಿನ ನಾಲ್ಕು ಶಾಲೆಯ ವಿದ್ಯಾರ್ಥಿಗಳು ಹಾಗೂ ಹತ್ತಿರದಲ್ಲಿದ್ದ ಕಟ್ಟಡಗಳಲ್ಲಿನ ನಿವಾಸಿಗಳು ಸೇರಿ 3,400 ಜನರನ್ನು ಸ್ಥಳಾಂತರಿಸಬೇಕಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಈ ಘಟನೆಯಲ್ಲಿ, ಹೊಗೆ ಸೇವಿಸಿ ಇಬ್ಬರು ಕಾರ್ಮಿಕರು ಅಸ್ವಸ್ಥರಾಗಿದ್ದಾರೆ. ಬೆಂಕಿ ಕಾಣಿಸಿಕೊಂಡಿರುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ ಎಂದೂ ಅವರು ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.