ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜರ್ಮನಿಯಲ್ಲಿ ಭಾರಿ ಪ್ರವಾಹ; ಸತ್ತವರ ಸಂಖ್ಯೆ 81ಕ್ಕೆ ಏರಿಕೆ, ಹಲವಾರು ಜನ ನಾಪತ್ತೆ

Last Updated 16 ಜುಲೈ 2021, 7:58 IST
ಅಕ್ಷರ ಗಾತ್ರ

ಬರ್ಲಿನ್‌ (ಜರ್ಮನಿ): ಜರ್ಮನಿಯಾದ್ಯಂತ ಶುಕ್ರವಾರವೂ ಭಾರಿ ಮಳೆ, ಪ್ರವಾಹ ಪರಿಸ್ಥಿತಿ ಮುಂದುವರಿದಿದ್ದು, 81 ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ನಾಪತ್ತೆಯಾಗಿದ್ದಾರೆ.

ಪ್ರವಾಹದಿಂದಾಗಿ ಪಶ್ಚಿಮ ಜರ್ಮನಿಯ ರಹಿನೆಲ್ಯಾಂಡ್-ಪಾಲಟಿನೇಟ್ ಪ್ರದೇಶದಲ್ಲೇ 50 ಮಂದಿ ಸಾವನ್ನಪ್ಪಿದ್ದಾರೆ.ಬೆಲ್ಜಿಯಂನಲ್ಲಿ ಸಹ ಪ್ರವಾಹ ತಲೆದೋರಿದ್ದು,30ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ನೆದರ್ಲೆಂಡ್‌ ಮತ್ತು ಲಕ್ಷಂಬರ್ಗ್‌ಗಳಲ್ಲೂ ಪ್ರವಾಹದಿಂದ ಅಪಾರ ಹಾನಿಯಾಗಿದೆ.

’ಮುಂದಿನ ದಿನಗಳಲ್ಲಿ ನಾವು ಇನ್ನೂ ಹೆಚ್ಚಿನ ಪ್ರಮಾಣದ ವಿಪತ್ತು ಸಂಭವಿಸುವ ಸಾಧ್ಯತೆಯಿದ್ದು, ಈ ಬಗ್ಗೆ ನನಗೆ ಆತಂಕವಾಗುತ್ತಿದೆ’ ಎಂದು ಜರ್ಮನಿಯ ಚಾನ್ಸೆಲರ್‌ ಏಂಜೆಲಾ ಮಾರ್ಕೆಲ್‌ ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬೈಡನ್ ಭೇಟಿಗಾಗಿ ಅವರು ವಾಷಿಂಗ್ಟನ್‌ಗೆ ಬಂದಿದ್ದಾರೆ.

ಫ್ಲಾಗ್‌ಸ್ಟಾಫ್‌(ಅಮೆರಿಕ)ವರದಿ: ಭಾರಿ ಬಿರುಗಾಳಿ, ಚಂಡಮಾರುತ ಹಾಗೂ ಮಳೆಯಿಂದಾಗಿ ಅಮೆರಿಕದ ಫ್ಲಾಗ್‌ಸ್ಟಾಫ್‌, ಅರಿಜೋನಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ತೀವ್ರ ಪ್ರವಾಹ ಉಂಟಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT