ಶನಿವಾರ, ಜನವರಿ 16, 2021
27 °C

ಶಾಂಘೈ: ಕೊರೊನಾ ಸೋಂಕು ಏರಿಕೆ, ನೂರಾರು ವಿಮಾನಗಳ ಸಂಚಾರ ರದ್ದು

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಶಾಂಘೈ: ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಲ್ಲಿನ ಪ್ರಮುಖ ಶಾಂಘೈ ವಿಮಾನ ನಿಲ್ದಾಣವು ನೂರಾರು ವಿಮಾನಗಳ ಸಂಚಾರವನ್ನು ರದ್ದುಪಡಿಸಲಾಗಿದೆ.

ನಗರದಲ್ಲಿ ಹಲವು ಸರಕು ನಿರ್ವಹಣಾ ಸಿಬ್ಬಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಾಂಘೈ ಪುಡಾಂಗ್ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಸಿಬ್ಬಂದಿಯನ್ನು ಕೋವಿಡ್‌ ‍ಪರೀಕ್ಷೆಗೆ ಒಳಪಡಿಸಲಾಗಿದೆ.

ಮೊದಲಿಗೆ ಕೊರೊನಾ ಸೋಂಕು ಚೀನಾದಲ್ಲಿ ಕಾಣಿಸಿಕೊಂಡಿದ್ದು, ಲಾಕ್‌ಡೌನ್‌ ಮತ್ತು ಪ್ರಯಾಣ ನಿರ್ಬಂಧ ಕ್ರಮಗಳ ಮೂಲಕ ಚೀನಾ ಸೋಂಕು ಹರಡುವುದನ್ನು ನಿಯಂತ್ರಿಸಿತ್ತು. ಈಗ ಮತ್ತೆ ಹಲವು ನಗರಗಳಲ್ಲಿ ಪ್ರಕರಣಗಳು ವರದಿಯಾಗಿದೆ.

ಈ ತಿಂಗಳು ಶಾಂಘೈ ವಿಮಾನ ನಿಲ್ದಾಣದಲ್ಲಿಯೇ ಏಳು ಸೋಂಕು ಪ್ರಕರಣಗಳು ವರದಿಯಾಗಿದ್ದವು.

ಮಂಗಳವಾರ ಪುಡಾಂಗ್ ವಿಮಾನ ನಿಲ್ದಾಣದಿಂದ 500 ಕ್ಕೂ ಹೆಚ್ಚು ವಿಮಾನಗಳ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದು ವಿಮಾನಯಾನದ ಮಾಹಿತಿ ನೀಡುವ ವಾರಿಫ್ಲೈಟ್‌ ಸಂಸ್ಥೆಯು ಹೇಳಿದೆ.

ಈ ನಗರದಲ್ಲಿ ಸುಮಾರು 26 ಲಕ್ಷಕ್ಕೂ ಹೆಚ್ಚು ಜನರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಲಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು