ಹೇಗ್: ಉಕ್ರೇನ್‌ನ ಮಕ್ಕಳ ಅಪಹರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಯುದ್ಧ ಅಪರಾಧಗಳಿಗಾಗಿ ರಷ್ಯಾದ ಅಧ್ಯಕ್ಷ ಪುಟಿನ್ ವಿರುದ್ಧ ಬಂಧನ ವಾರಂಟ್ ಜಾರಿಗೊಳಿಸಿರುವುದಾಗಿ ಅಂತರರಾಷ್ಟ್ರೀಯ ಅಪರಾಧ ನ್ಯಾಯಾಲಯ(ಐಸಿಸಿ) ಶುಕ್ರವಾರ ತಿಳಿಸಿದೆ.
‘ಮಕ್ಕಳನ್ನು ಕಾನೂನುಬಾಹಿರವಾಗಿ ಗಡೀಪಾರು ಮಾಡುವ ಯುದ್ಧ ಅಪರಾಧ ಮತ್ತು ಉಕ್ರೇನ್‌ನ ಆಕ್ರಮಿತ ಪ್ರದೇಶಗಳಿಂದ ರಷ್ಯಾದ ಒಕ್ಕೂಟಕ್ಕೆ ಕಾನೂನುಬಾಹಿರವಾಗಿ ಉಕ್ರೇನ್‌ನ ಮಕ್ಕಳನ್ನು ಸಾಗಿಸುವ ಯುದ್ಧ ಅಪರಾಧಕ್ಕೆ ಪುಟಿನ್ ಜವಾಬ್ದಾರರಾಗಿದ್ದಾರೆ’ ಎಂದು ನ್ಯಾಯಾಲಯವು ಹೇಳಿಕೆಯಲ್ಲಿ ತಿಳಿಸಿದೆ.
ರಷ್ಯಾ ಒಕ್ಕೂಟದ ಅಧ್ಯಕ್ಷರ ಕಚೇರಿಯಲ್ಲಿ ಮಕ್ಕಳ ಹಕ್ಕುಗಳ ಆಯುಕ್ತರಾದ ಮಾರಿಯಾ ಅಲೆಕ್ಸೆಯೆವ್ನಾ ಎಲ್ವೊವಾ-ಬೆಲೋವಾ ಅವರನ್ನು ಇದೇ ಆರೋಪದಡಿ ಬಂಧಿಸಲು ಶುಕ್ರವಾರ ವಾರಂಟ್ ಹೊರಡಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.