ಶನಿವಾರ, ಅಕ್ಟೋಬರ್ 31, 2020
24 °C

ಅಮೆರಿಕದ ಆರ್ಥಿಕತೆ ಹಾಳುಮಾಡಿದ ಬೈಡೆನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್‌: ’ತನ್ನ ಐದು ವರ್ಷಗಳ ಆಡಳಿತಾವಧಿಯಲ್ಲಿ ದೇಶದ ಆರ್ಥಿಕತೆಯನ್ನು ಅಮೆರಿಕದ ಮಾಜಿ ಉಪಾಧ್ಯಕ್ಷ ಜೊ ಬೈಡನ್ ತೀರಾ ಹದಗೆಡಿಸಿದ್ದಾರೆ’ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರೋಪಿಸಿದ್ದಾರೆ.

’ಈ ಅಧ್ಯಕ್ಷೀಯ ಚುನಾವಣೆಯಲ್ಲಿ ಅವರು ಜಯಗಳಿಸಿದರು, ಅದು ಚೀನಾದ ಗೆಲುವಾಗಲಿದೆ’ ಎಂದು ಟ್ರಂಪ್‌ ಟೀಕಿಸಿದ್ದಾರೆ.

ಮಂಗಳವಾರ ಒಹಾಯೊದ ಡೇಟನ್‌ನಲ್ಲಿ ನಡೆದ ರ್‍ಯಾಲಿಯಲ್ಲಿ ಮಾತನಾಡಿದ ಅವರು, ’ನಿಮಗೆ ಗೊತ್ತಿದೆಯೇ, ಜೊ ಬೈಡನ್ 47 ವರ್ಷಗಳಿಂದ ನಿಮ್ಮ ಉದ್ಯೋಗಗಳನ್ನು ಚೀನಾ ಮತ್ತು ವಿದೇಶಗಳಿಗೆ ರವಾನಿಸುತ್ತಿದ್ದಾರೆ. ಆದರೆ, ನಾನು ನಾಲ್ಕು ವರ್ಷಗಳಿಂದ ಆ ಉದ್ಯೋಗಗಳನ್ನು ನಮ್ಮ ದೇಶಕ್ಕೆ ಮರಳಿ ಕರೆತರುತ್ತಿದ್ದೇನೆ’ ಎಂದು ಹೇಳಿದರು.

’‌ನವೆಂಬರ್ 3 ರಂದು ನಡೆಯುವ ಚುನಾವಣೆ ಬಹಳ ಮಹತ್ವದ್ದಾಗಿದೆ' ಎಂದು ಬಣ್ಣಿಸಿದ ಟ್ರಂಪ್‌, ಆ ದಿನ ಮತದಾರರು ನಮ್ಮ ದೇಶವನ್ನು ಉನ್ನತ ಸ್ಥಾನಕ್ಕೆ ಏರಿಸುತ್ತಾರೋ ಅಥವಾ ನಮ್ಮ ಆರ್ಥಿಕತೆ ಕುಸಿತ ಕಾಣವುದ್ದಾಗಿ, ಉದ್ಯೋಗಾವಕಾಶಗಳನ್ನು ಕಳೆದುಕೊಳ್ಳುವುದಕ್ಕಾಗಿ ಜೊ ಬೈಡನ್‌ಗೆ ಅವಕಾಶ ಮಾಡಿಕೊಡುತ್ತಾರೋ ಎಂಬುದು ನಿರ್ಧಾರವಾಗುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು