ಸೋಮವಾರ, ಜನವರಿ 24, 2022
20 °C

ಅಂತರರಾಷ್ಟ್ರೀಯ ಹಣಕಾಸು ನಿಧಿಗೆ ಗುಡ್‌ಬೈ ಹೇಳಲಿರುವ ಗೀತಾ ಗೋಪಿನಾಥ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್‌) ಮುಖ್ಯ ಅರ್ಥಶಾಸ್ತ್ರಜ್ಞೆ ಗೀತಾ ಗೋಪಿನಾಥ್ ಅವರು ತಮ್ಮ ಹುದ್ದೆಯನ್ನು ಜನವರಿಯಲ್ಲಿ ತೊರೆಯಲಿದ್ದಾರೆ, ಅವರು ಹಾರ್ವರ್ಡ್‌ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ವಿಭಾಗಕ್ಕೆ ಮರಳಲಿದ್ದಾರೆ.

ಗೀತಾ ಅವರು 2019ರ ಜನವರಿಯಲ್ಲಿ ಐಎಂಎಫ್‌ನಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞೆಯಾಗಿ ಕೆಲಸ ಆರಂಭಿಸಿದ್ದರು. ಅದಕ್ಕೂ ಮೊದಲು ಅವರು ಹಾರ್ವರ್ಡ್‌ ವಿಶ್ವವಿದ್ಯಾಲಯದಲ್ಲಿ ಅಧ್ಯಾಪನ ವೃತ್ತಿಯಲ್ಲಿ ತೊಡಗಿದ್ದರು. ‘ಐಎಂಎಫ್‌ಗೆ ಗೀತಾ ಅವರ ಕೊಡುಗೆ ಗಮನಾರ್ಹವಾದುದು’ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕ್ರಿಸ್ಟಲೀನಾ ಜಾರ್ಜೀವಾ ಹೇಳಿದ್ದಾರೆ.

ಗೀತಾ ಅವರು ಜನಿಸಿದ್ದು ಮೈಸೂರಿನಲ್ಲಿ. ಐಎಂಎಫ್‌ನಲ್ಲಿ ಮುಖ್ಯ ಅರ್ಥಶಾಸ್ತ್ರಜ್ಞ ಸ್ಥಾನದಲ್ಲಿ ಕೆಲಸ ನಿಭಾಯಿಸಿದ ಮೊದಲ ಮಹಿಳೆ ಗೀತಾ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು