ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ವಿರೋಧ ಪಕ್ಷಗಳ ಪ್ರತಿಭಟನೆ ನಡುವೆಯೂ ತೈಲ ಬೆಲೆ ಏರಿಕೆ ಸಾಧ್ಯತೆ

Last Updated 7 ನವೆಂಬರ್ 2021, 12:40 IST
ಅಕ್ಷರ ಗಾತ್ರ

ಇಸ್ಲಾಮಾಬಾದ್:‌ ಇತ್ತೀಚೆಗೆ ಇಂಧನ ದರ ಏರಿಕೆ ಮಾಡಿದ್ದನ್ನು ಖಂಡಿಸಿ ವಿರೋಧ ಪಕ್ಷಗಳು ಪ್ರತಿಭಟನೆ ಮುಂದುವರಿಸಿರುವುದರ ನಡುವೆಯೂ ಪಾಕಿಸ್ತಾನ ಸರ್ಕಾರವು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯನ್ನು ಮತ್ತಷ್ಟು ಹೆಚ್ಚಿಸುವ ಸಾಧ್ಯತೆ ಇದೆ ಎಂದು ಅಲ್ಲಿನ ಮಾಧ್ಯಮವೊಂದು ವರದಿ ಮಾಡಿದೆ.

ʼಪೆಟ್ರೋಲಿಯಂ ಅಭಿವೃದ್ಧಿ ಸುಂಕವನ್ನು (ಪಿಡಿಎಲ್) ಹೆಚ್ಚಿಸುವಂತೆಅಂತರರಾಷ್ಟ್ರೀಯ ಹಣಕಾಸು ನಿಧಿಯೂ (ಐಎಂಎಫ್)‌ ತಿಳಿಸಿದೆ. ಆದರೆ, ಇದು ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ಅಂತರರಾಷ್ಟ್ರೀಯ ದರವನ್ನುಅವಲಂಬಿಸಿದೆʼ ಎಂದು ಪ್ರಧಾನಿ ಇಮ್ರಾನ್‌ ಖಾನ್‌ ಅವರ ಹಣಕಾಸು ಸಲಹೆಗಾರ ಶೌಕತ್‌ ತಾರಿನ್ ಹೇಳಿರುವುದಾಗಿದಿ ನ್ಯೂಸ್‌ ಇಂಟರ್‌ನ್ಯಾಷನಲ್‌ ವರದಿ ಮಾಡಿದೆ.‌

ಅಂತರರಾಷ್ಟ್ರೀಯ ತೈಲ ದರ ಇಳಿಕೆಯಾದರೆ, ಸರ್ಕಾರವುಪಿಡಿಎಲ್‌ ಅನ್ನು ಹೆಚ್ಚಿಸಲು ಸುಲಭವಾಗಲಿದೆ ಎಂದೂ ತಾರಿನ್ ಹೇಳಿದ್ದಾರೆ.

ಇತ್ತೀಚೆಗೆ ಬೆಲೆ ಏರಿಕೆ ಮಾಡಿದ್ದನ್ನು ಸಮರ್ಥಿಸಿಕೊಂಡಿರುವ ಅವರು, ಪೆಟ್ರೋಲಿಯಂ ಉತ್ಪನ್ನಗಳ ಬೆಲೆ ಏರಿಕೆಯು ಅಂತರರಾಷ್ಟ್ರೀಯ ಮಾರುಕಟ್ಟೆಯೊಂದಿಗೆ ನೇರ ಸಂಬಂಧ ಹೊಂದಿದೆ ಎಂದು ಪ್ರತಿಪಾದಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT