ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಸೇನಾ ಮುಖ್ಯಸ್ಥ ಬಾಜ್ವಾ ವಿರುದ್ಧ ಇಮ್ರಾನ್ ಪರೋಕ್ಷ ವಾಗ್ದಾಳಿ

Last Updated 21 ಏಪ್ರಿಲ್ 2022, 13:02 IST
ಅಕ್ಷರ ಗಾತ್ರ

ಲಾಹೋರ್: ಕೆಲವು ಶಕ್ತಿಯುತ ಸಂಸ್ಥೆಗಳ ಕೆಟ್ಟ ಚಾಳಿಯಿಂದಾಗಿ ತಾವು ಅಧಿಕಾರ ಸ್ಥಾನದಿಂದ ಕೆಳಗಿಳಿಯಬೇಕಾಯಿತು ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ದೇಶದ ಸೇನಾ ಮುಖ್ಯಸ್ಥ ಜನರಲ್ ಖಮರ್ ಜಾವೇದ್ ಬಾಜ್ವಾ ಅವರ ವಿರುದ್ಧ ಪರೋಕ್ಷ ವಾಗ್ದಾಳಿ ಮಾಡಿದ್ದಾರೆ.

ಬುಧವಾರ ರಾತ್ರಿ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಟ್ವಿಟರ್ ವೇದಿಕೆ ಮೂಲಕ ಪ್ರತಿಕ್ರಿಯಿಸಿದ ಅವರು, ಸರ್ಕಾರದ ಸಂಸ್ಥೆಗಳಲ್ಲಿ ಮನುಷ್ಯರು ಇದ್ದಾರೆ. ಆದರೆ ಒಂದಿಬ್ಬರು ಕೆಟ್ಟ ಕೆಲಸ ಮಾಡಿದರೆ, ಇಡೀ ಸಂಸ್ಥೆ ಜವಾಬ್ದಾರಿಯಾಗುವುದಿಲ್ಲ. ಒಬ್ಬ ವ್ಯಕ್ತಿ ಕೆಟ್ಟ ಕೆಲಸ ಮಾಡಿದರೆ, ಅದನ್ನು ಸಂಸ್ಥೆಯ ತಪ್ಪು ಎಂದು ಅರ್ಥೈಸಲಾಗದು ಎಂದು ಪಾಕಿಸ್ತಾನ ಸೇನಾ ಮುಖ್ಯಸ್ಥ ಬಜ್ವಾ ಅವರನ್ನು ಉದ್ದೇಶಿಸಿ ಹೇಳಿದ್ದಾರೆ.

ಕೆಲವು ತಿಂಗಳ ಹಿಂದೆ ಪ್ರಧಾನಿ ಇಮ್ರಾನ್ ನೇತೃತ್ವದ ಪಿಟಿಐ ಸರ್ಕಾರ ಮತ್ತು ಸೇನೆಯ ನಡುವಿನ ಸಂಬಂಧವು ಉತ್ತಮವಾಗಿರಲಿಲ್ಲ. ಈ ಸಂಬಂಧ ಸುಧಾರಣೆ ಮತ್ತು ತಪ್ಪು ಕಲ್ಪನೆಗಳನ್ನು ಹೋಗಲಾಡಿಸಲು ನಾನು ಸೇರಿದಂತೆ ಹಲವರು ಪ್ರಯತ್ನಿಸಿದೆವು. ಆದರೆ, ಅದು ಸಾಧ್ಯವಾಗಲಿಲ್ಲ ಎಂದು ಬುಧವಾರವಷ್ಟೇ ಮಾಜಿ ಸಚಿವ ಫವಾದ್ ಚೌಧರಿ ಅವರು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT