ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ವಿರೋಧಿ ಅಲ್ಲ: ಇಮ್ರಾನ್‌ ಖಾನ್‌

Last Updated 4 ಏಪ್ರಿಲ್ 2022, 19:51 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ನಾನು ಭಾರತದ ಅಥವಾ ಅಮೆರಿಕದ ವಿರೋಧಿ ಅಲ್ಲ. ಅಥವಾ ಯಾವುದೇ ದೇಶದ ವಿರುದ್ಧವೂ ಇಲ್ಲ. ಪರಸ್ಪರ ಗೌರವದಿಂದ ಎಲ್ಲ ರಾಷ್ಟ್ರಗಳೊಂದಿಗೂ ಉತ್ತಮ ಸಂಬಂಧ ಬಯಸುತ್ತೇನೆ‘ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಹೇಳಿದರು.

ದೂರದರ್ಶನದ ಮೂಲಕ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ
ನಡೆಸಿದರು.

ರಾಜೀನಾಮೆ: ರಾಜಕೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಮೊಯೀದ್ ಯೂಸುಫ್ ಸೋಮವಾರ ರಾಜೀನಾಮೆ ನೀಡಿದ್ದಾರೆ.

‘ನಾನು ಅತ್ಯಂತ ತೃಪ್ತಿಯಿಂದ ಹೊರಡುತ್ತಿದ್ದೇನೆ. ಇಷ್ಟು ದಿನ ಕಾರ್ಯನಿರ್ವಹಿಸಲು ಅವಕಾಶ ಒದಗಿಸಿದ ಪ್ರಧಾನಿ ಇಮ್ರಾನ್‌ ಖಾನ್‌ ಮತ್ತು ಇತರರಿಗೆ ಧನ್ಯವಾದ‘ ಎಂದು ಅವರು ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT