‘ಭಾರತದಿಂದ ಪಡೆದ ಚಿನ್ನದ ಪದಕ ಮಾರಿದ ಇಮ್ರಾನ್ ಖಾನ್’

ಇಸ್ಲಾಮಾಬಾದ್ : ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಾರತದಿಂದ ಪಡೆದಿದ್ದ ಚಿನ್ನದ ಪದಕವನ್ನು ಮಾರಾಟ ಮಾಡಿದ್ದಾರೆ ಎಂದು ರಕ್ಷಣಾ ಸಚಿವ ಖವಾಜ ಆಸಿಫ್ ಆರೋಪಿಸಿದ್ದಾರೆ.
ಟಿ.ವಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ. ಆದರೆ ಈ ಕುರಿತ ಹೆಚ್ಚಿನ ಮಾಹಿತಿ ನೀಡಿಲ್ಲ ಎಂದು ಎಕ್ಸ್ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.
ತೊಶಖಾನ ಪ್ರಕರಣದಲ್ಲಿ ಇಮ್ರಾನ್ ಖಾನ್ ಸುಳ್ಳು ಹೇಳಿಕೆ ನೀಡಿದ ಸಂಬಂಧ ಚುನಾವಣಾ ಆಯೋಗ ಅವರನ್ನು ಅನರ್ಹಗೊಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.