ಪ್ರತಿಭಟನೆ ನಡೆಸಿದರೆ ಬಂಧನ: ಇಮ್ರಾನ್ ಖಾನ್‌ಗೆ ಸಚಿವ ಎಚ್ಚರಿಕೆ

ಲಾಹೋರ್: ಸರ್ಕಾರವನ್ನು ವಿರೋಧಿಸಿ ಪ್ರತಿಭಟನೆ ನಡೆಸಲು ಯತ್ನಿಸಿದರೆ ಬಂಧಿಸಬೇಕಾಗುತ್ತದೆ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಪಾಕಿಸ್ತಾನದ ರಕ್ಷಣಾ ಸಚಿವ ರಾಣಾ ಸನಾವುಲ್ಲಾ ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಜೊತೆಗೆ ಪಾಕಿಸ್ತಾನ ತೆಹ್ರೀಕ್-ಎ-ಇನ್ಸಾಫ್ ಮುಖ್ಯಸ್ಥರು ಆಂದೋಲನದ ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ಪಂಜಾಬ್ ಪ್ರಾಂತ್ಯದ ಮುಲ್ತಾನ್‌ನಲ್ಲಿ ನಡೆದ ಪಕ್ಷದ ಸಮಾವೇಶದಲ್ಲಿ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ ಕಾರ್ಯಕರ್ತರೊಂದಿಗೆ ಮಾತನಾಡುತ್ತಿದ್ದಾಗ ಸನಾವುಲ್ಲಾ ಅವರು ಮಾಜಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು ಎಂದು ಡಾನ್ ಪತ್ರಿಕೆ ವರದಿ ಮಾಡಿದೆ.
ಫೆಡರಲ್ ಸರ್ಕಾರದ ವಿರುದ್ಧ 'ಜೈಲ್ ಭರೋ ತೆಹ್ರೀಕ್' ಪ್ರತಿಭಟನೆ ತಯಾರಿ ನಡೆಸುವಂತೆ ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ಇಮ್ರಾನ್ ಸೂಚನೆ ನೀಡಿದ ಕೆಲವು ದಿನಗಳ ನಂತರ ಸಚಿವರು ಎಚ್ಚರಿಕೆ ನೀಡಿದ್ದಾರೆ. ತಮ್ಮ ಪಕ್ಷದ ನಾಯಕರನ್ನು ಬಂಧಿಸಿದಾಗ ಹಿಂಸೆ ನೀಡಿದ್ದಕ್ಕಾಗಿ ಮತ್ತು ಹೊಸ ಸಾರ್ವತ್ರಿಕ ಚುನಾವಣೆಯನ್ನು ಘೋಷಿಸಲು ವಿಳಂಬ ಮಾಡಿದ್ದಕ್ಕಾಗಿ ಪ್ರತಿಭಟನೆಗೆ ಕರೆ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.