ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕಿಸ್ತಾನದಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಸರ್ಕಾರವನ್ನು ದೂಷಿಸಿದ ಇಮ್ರಾನ್ ಖಾನ್

Last Updated 20 ಜುಲೈ 2022, 15:21 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ತಲೆದೋರಿರುವ ಆರ್ಥಿಕ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬುಧವಾರ ಆರೋಪಿಸಿದ್ದಾರೆ.

ಪ್ರಧಾನಿ ಶೆಹಬಾಜ್‌ ಷರೀಫ್‌ ವಿರುದ್ಧ ವಾಗ್ದಾಳಿ ನಡೆಸಿರುವ ತೆಹ್ರಿಕ್‌-ಇ-ಇನ್ಸಾಫ್‌ ಪಕ್ಷದ ಅಧ್ಯಕ್ಷರೂ ಆಗಿರುವ ಇಮ್ರಾನ್ ಖಾನ್, ಆರ್ಥಿಕ ಬಿಕ್ಕಟ್ಟಿನ ಪರಿಸ್ಥಿತಿಯನ್ನು ಎದುರಿಸಲು ಪ್ರಧಾನಿ ಸಮರ್ಥರಲ್ಲ ಎಂದುದೂರಿದ್ದಾರೆ.

ಏಪ್ರಿಲ್‌ನಲ್ಲಿ ಅಮೆರಿಕನ್ ಡಾಲರ್ ಎದುರು ಪಾಕಿಸ್ತಾನಿ ರೂಪಾಯಿ ಮೌಲ್ಯ 178 ರೂ. ಇತ್ತು. ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) ಒಪ್ಪಂದದ ಹೊರತಾಗಿಯೂ ಈಗ ಮೌಲ್ಯ 224 ರೂ.ಗೆ ಕುಸಿದಿದೆ. ಇದು ಶರೀಫ್ ಕುಟುಂಬವು ಲೂಟಿ, ಅಕ್ರಮ ಹಣ ವರ್ಗಾವಣೆ ನಡೆಸುತ್ತದೆ ಎಂಬುದನ್ನು ತೋರಿಸುತ್ತದೆ ಎಂದು ಆರೋಪಿಸಿದರು.

ಇದಕ್ಕೆಲ್ಲ ಆಡಳಿತವನ್ನು ಬದಲಿಸಿ ಪಾಕಿಸ್ತಾನವನ್ನು ಈ ದುಸ್ಥಿತಿಗೆ ತಲುಪಿಸಿದ ಎಲ್ಲರೂ ಹೊಣೆಗಾರರು ಎಂದು ಹೇಳಿದರು.

ಕಳೆದೆರಡು ದಿನಗಳಲ್ಲಿ ಡಾಲರ್ ಎದುರಿಗೆ ಪಾಕಿಸ್ತಾನಿ ರೂಪಾಯಿ ಭಾರಿ ಕುಸಿತವನ್ನು ಕಂಡಿದೆ. ಇನ್ನೊಂದೆಡೆ ಪಾಕಿಸ್ತಾನದ ಷೇರು ಮಾರುಕಟ್ಟೆ ವಹಿವಾಟಿನಲ್ಲಿ 1,500ಕ್ಕೂ ಹೆಚ್ಚು ಅಂಕಗಳನ್ನು ಕಳೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT