ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಸೋಲುಂಡ ನಂತರ ಡೊನಾಲ್ಡ್ ಟ್ರಂಪ್ ವಿರುದ್ಧ ಎರಡನೇ ಬಾರಿಗೆ ದೋಷಾರೋಪಣೆಯನ್ನು(ಮಹಾಭಿಯೋಗ) ಅಲ್ಲಿನ ಸಂಸತ್ ಹೊರಿಸಿದೆ. ಆ ಮೂಲಕ ಅಮೆರಿಕದ ಇತಿಹಾಸದಲ್ಲೇ ಎರಡು ಬಾರಿ ಮಹಾಭಿಯೋಗಕ್ಕೆ ಗುರಿಯಾದ ಅಧ್ಯಕ್ಷರಲ್ಲಿ ಟ್ರಂಪ್ ಮೊದಲಿಗರೆಂದು ದಾಖಲಾಗಿದ್ದಾರೆ.

ಅಧಿಕೃತವಾಗಿ ಹುದ್ದೆ ತೊರೆದು ಹೋಗಲು ಡೊನಾಲ್ಡ್ ಟ್ರಂಪ್‌ಗೆ ಒಂದು ಕೊನೆಯ ಅವಕಾಶವನ್ನು ಡೆಮೋಕ್ರಾಟ್ಸ್ ನೀಡಿದ್ದಾರೆ. ಟ್ರಂಪ್ ಅಧ್ಯಕ್ಷೀಯ ಅವಧಿ ಕೊನೆಯಾಗಲು ಒಂದು ವಾರ ಮಾತ್ರ ಬಾಕಿ ಉಳಿದಿದ್ದು, ಯಾವಾಗ ಹುದ್ದೆ ಬಿಟ್ಟು ನಿರ್ಗಮಿಸುವರು ಎನ್ನುವುದು ಇನ್ನೂ ಖಚಿತವಾಗಿಲ್ಲ.

ಅಮೆರಿಕದ ಕ್ಯಾಪಿಟಲ್ ಕಟ್ಟಡದ ಮೇಲೆ ನಡೆದ ದಾಳಿ ಮತ್ತು ಹಿಂಸಾಚಾರ, ಐವರ ಸಾವು ಪ್ರಕರಣ ದೊಡ್ಡ ಸಮಸ್ಯೆ ಸೃಷ್ಟಿಸಿದೆ. ಡೊನಾಲ್ಡ್ ಟ್ರಂಪ್ ಬೆಂಬಲಿಗರ ಕೃತ್ಯ ಇದಾಗಿರುವುದರಿಂದ, ಟ್ರಂಪ್ ಅಮೆರಿಕ ಸಂಸತ್‌ನಲ್ಲಿ ತೀವ್ರ ಮುಖಭಂಗಕ್ಕೆ ಒಳಗಾಗಿದ್ದಾರೆ.

ಡೊನಾಲ್ಡ್ ಟ್ರಂಪ್ ಎರಡನೇ ಬಾರಿಗೆ ವಾಗ್ದಂಡನೆಗೂ ಗುರಿಯಾಗಿದ್ದಾರೆ. ಬುಧವಾರ ಜನಪ್ರತಿನಿಧಿಗಳ ಸಭೆಯಲ್ಲಿ(ಹೌಸ್ ಆಫ್ ರೆಪ್ರಸೆಂಟೇಟಿವ್ಸ್) ವಾಗ್ದಂಡನೆ ಕುರಿತು ಸುದೀರ್ಘ ಚರ್ಚೆ ನಡೆದಿದೆ. ನಿರ್ಣಯವನ್ನು ಮತಕ್ಕೆ ಹಾಕುವ ಮುನ್ನ ಬಹುತೇಕ ಸದಸ್ಯರು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.