ಶುಕ್ರವಾರ, ಅಕ್ಟೋಬರ್ 23, 2020
21 °C

‘ವಿಶ್ವಾಸ, ಗೌರವದ ಮೇಲೆ ಭಾರತ– ಬಾಂಗ್ಲಾ ಸಂಬಂಧ ನಿರ್ಮಾಣ’

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಢಾಕಾ: ‘ಭಾರತ ಮತ್ತು ಬಾಂಗ್ಲಾದೇಶ ಅಭಿವೃದ್ಧಿಯಲ್ಲಿ ಪಾಲುದಾರರಾಗಿದ್ದು, ಉಭಯ ದೇಶಗಳ ನಡುವಿನ ಸಂಬಂಧ ಪರಸ್ಪರ ವಿಶ್ವಾಸ ಮತ್ತು ಗೌರವದ ಮೇಲೆ ನಿರ್ಮಾಣವಾಗಿದೆ’ ಎಂದು ಭಾರತದ ರಾಯಭಾರಿ ತಿಳಿಸಿದ್ದಾರೆ. 

ಮಹಾತ್ಮ ಗಾಂಧೀಜಿ ಅವರ 150 ನೇ ಜನ್ಮದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ‘ಮಹಾತ್ಮ ಗಾಂಧಿಯ ಸ್ಮರಣೆ’ ಕಾರ್ಯಕ್ರಮದಲ್ಲಿ ಭಾರತದ ಹೈ ಕಮಿಷನರ್‌ ರಿವಾ ಗಂಗೂಲಿ ದಾಸ್‌ ಮಾತನಾಡಿದರು. 

‘ವಿಮೋಚನಾ ಯುದ್ಧದ 50 ನೇ ವಾರ್ಷಿಕೋತ್ಸವ ಮತ್ತು ಭಾರತ ಮತ್ತು ಬಾಂಗ್ಲಾದೇಶದ ನಡುವಿನ ರಾಜತಾಂತ್ರಿಕ ಸಂಬಂಧಗಳ  50 ನೇ ವರ್ಷಾಚರಣೆಯ ಜಂಟಿ ಸ್ಮರಣಾರ್ಥಕ್ಕಾಗಿ ಭಾರತ ಎದುರು ನೋಡುತ್ತಿದೆ. ಉಭಯ ದೇಶಗಳ ನಡುವಿನ ಐತಿಹಾಸಿಕ ಸ್ನೇಹ ಸಂಬಂಧವನ್ನು ಇನ್ನಷ್ಟು ಗಟ್ಟಿಗೊಳಿಸಲು  ಒಟ್ಟಾಗಿ ಕಾರ್ಯಪ್ರವೃತ್ತವಾಗಬೇಕು’ ಎಂದು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು