ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ವಿಪಕ್ಷೀಯ ಮಾತುಕತೆ ಮೂಲಕ ಭಾರತ –ಪಾಕಿಸ್ತಾನ ಒಟ್ಟಾಗಿ ಕೆಲಸ ಮಾಡಬೇಕು: ಅಮೆರಿಕ

Last Updated 24 ಜುಲೈ 2021, 4:01 IST
ಅಕ್ಷರ ಗಾತ್ರ

ವಾಷಿಂಗ್ಟನ್: ಗಡಿ ವಿವಾದಕ್ಕೆ ಸಂಬಂಧಿಸಿ ಭಾರತ ಮತ್ತು ಪಾಕಿಸ್ತಾನ ಉಭಯ ದೇಶಗಳು ದ್ವಿಪಕ್ಷೀಯ ಮಾತುಕತೆ ಮೂಲಕ ಉದ್ಭವಿಸಿರುವ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು. ಜತೆಗೆ, ಎರಡು ದೇಶಗಳು ಪರಸ್ಪರ ಒಮ್ಮತದಿಂದ ಕೆಲಸ ಮಾಡುವ ಅವಶ್ಯಕತೆಯಿದೆ ಎಂದು ಅಮೆರಿಕ ಹೇಳಿದೆ.

‘ಭಾರತ– ಪಾಕಿಸ್ತಾನ ಉಭಯ ದೇಶಗಳು ಒಟ್ಟಾಗಿ ಕೆಲಸ ಮಾಡಬೇಕೆಂದು ಅಮೆರಿಕ ಬಲವಾಗಿ ನಂಬುತ್ತದೆ’ ಎಂದು ದಕ್ಷಿಣ ಮತ್ತು ಮಧ್ಯ ಏಷ್ಯಾ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ಡೀನ್ ಥಾಂಪ್ಸನ್ ಹೇಳಿದ್ದಾರೆ.

ಉಭಯ ರಾಷ್ಟ್ರಗಳ ನಡುವೆ ಸ್ಥಿರವಾದ ಸಂಬಂಧ ಬೆಳೆಸುವ ಮಾರ್ಗಗಳನ್ನು ಕಂಡುಕೊಳ್ಳುವ ಪ್ರಯತ್ನಗಳನ್ನು ಮುಂದುವರಿಸಲು ಅಮೆರಿಕ ಯಾವಾಗಲೂ ಪ್ರೋತ್ಸಾಹಿಸುತ್ತದೆ ಎಂದು ಥಾಂಪ್ಸನ್ ತಿಳಿಸಿದ್ದಾರೆ.

370ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧ ಮತ್ತಷ್ಟು ಹದಗೆಟ್ಟಿದೆ.

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಟೋನಿ ಬ್ಲಿಂಕೆನ್ ಅವರು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅಫ್ಘಾನಿಸ್ತಾನದ ಕೆಲವು ವಿಷಯಗಳ ಬಗ್ಗೆ ಚರ್ಚಿಸುವ ಸಾಧ್ಯತೆಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT