ಮಂಗಳವಾರ, ಏಪ್ರಿಲ್ 13, 2021
32 °C
ಬಾಂಗ್ಲಾದೊಂದಿಗೆ ಮೂರು ಒಡಂಬಡಿಕೆಗಳಿಗೆ ಸಹಿ ಹಾಕುವ ಸಾಧ್ಯತೆ

ಬಾಂಗ್ಲಾ ಸುವರ್ಣ ಸ್ವಾತಂತ್ರ್ಯ ಮಹೋತ್ಸವ: ಮುಂದಿನವಾರ ಢಾಕಾಗೆ ಪ್ರಧಾನಿ ಮೋದಿ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಢಾಕಾ: ಬಾಂಗ್ಲಾದೇಶದ ಸುವರ್ಣ ಸ್ವಾತಂತ್ರ್ಯ ಮಹೋತ್ಸವ ಹಾಗೂ ರಾಷ್ಟ್ರಪಿತ ಬಂಗಬಂಧು ಶೇಖ್‌ ಮುಜಿಬುರ್‌ ರಹಮಾನ್ ಅವರ ಜನ್ಮಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮುಂದಿನವಾರ ಢಾಕಾಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿಯವರು, ಬಾಂಗ್ಲಾದೊಂದಿಗೆ ಮೂರು ಒಡಂಬಡಿಕೆಗಳಿಗೆ ಸಹಿ ಹಾಕುವ ಸಾಧ್ಯತೆ ಇದೆ.

‘ಬಾಂಗ್ಲಾ ಭೇಟಿಯಲ್ಲಿ ಪ್ರಧಾನಿ ನರೇಂದ್ರಮೋದಿಯವರು ಢಾಕಾದ ಹೊರವಲಯದ ಮೂರು ಸ್ಥಳಗಳಿಗೆ ಭೇಟಿ ನೀಡಲಿದ್ದಾರೆ. ಇದೇ ವೇಳೆ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ನಂತರ ಉಭಯ ರಾಷ್ಟ್ರಗಳ ನಾಯಕರು ಮೂರು ಒಡಂಬಡಿಕೆಗಳಿಗೆ (ಎಂಒಯು) ಸಹಿ ಹಾಕಲಿದ್ದಾರೆ. ಸದ್ಯ ಈ ಮೂರು ಎಂಒಯುಗಳು ಇನ್ನೂ ಅಂತಿಮಗೊಂಡಿಲ್ಲ‘ ಎಂದು ಮೊಮೆನ್ ಹೇಳಿದರು.

‘ವಿಪತ್ತು ನಿರ್ವಹಣೆ ಮತ್ತು ಎರಡು ರಾಷ್ಟ್ರಗಳಲ್ಲಿರುವ ಕೆಲವು ಸಂಸ್ಥೆಗಳೊಂದಿಗಿನ ಪರಸ್ಪರ ಸಹಕಾರ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಒಡಂಬಡಿಕೆ ಮಾಡಿಕೊಳ್ಳುವ ಸಾಧ್ಯತೆ ಇದೆ‘ ಎಂದು ವಿದೇಶಾಂಗ ಕಾರ್ಯದರ್ಶಿ ಮೊಮೆನ್ ಹೇಳಿದ್ದಾರೆ. ‌

ಐದು ದಿನಗಳ ಕಾಲ ನಡೆಯುವ ಈ ಕಾರ್ಯಕ್ರಮದಲ್ಲಿ ಭಾರತ ಸೇರಿದಂತೆ, ನೇಪಾಳ, ಶ್ರೀಲಂಕಾ, ಭೂತಾನ್ ಮತ್ತು ಮಾಲ್ಡೀವ್ಸ್‌ ರಾಷ್ಟ್ರಗಳ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಬೇರೆ ಬೇರೆ ದಿನಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

‘ಯಾವುದೇ ಶೃಂಗಸಭೆಗಳಿಲ್ಲದೆಯೂ, ಐದು ರಾಷ್ಟ್ರಗಳ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದಾರೆ. ಹೀಗಾಗಿ ಇದು ಬಾಂಗ್ಲಾದೇಶದ ಪಾಲಿಗೆ ಐತಿಹಾಸಿಕ ಕಾರ್ಯಕ್ರಮವಾಗಲಿದೆ‘ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕ್‌ ಅಬ್ದುಲ್ ಮೊಮೆನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

‘ಕೋವಿಡ್‌ 19 ಸಾಂಕ್ರಾಮಿಕದ ನಡುವೆಯೂ ನೆರೆ ಹೊರೆಯ ರಾಷ್ಟ್ರಗಳ ನಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ರಾಷ್ಟ್ರಪಿತರಿಗೆ ಗೌರವ ಸಲ್ಲಿಸುತ್ತಿದ್ದಾರೆ‘ ಎಂದು ಅವರು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು