ಸೋಮವಾರ, ಅಕ್ಟೋಬರ್ 26, 2020
25 °C

ಚೀನಾವನ್ನು ಹಿಂದಿಕ್ಕಿ ವಿಶ್ವಸಂಸ್ಥೆಯ ಮಂಡಳಿಗೆ ಆಯ್ಕೆಯಾದ ಭಾರತ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ವಿಶ್ವಸಂಸ್ಥೆಯ ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಾದ ‘ಮಹಿಳೆಯರ ಸ್ಥಿತಿಗತಿ ಆಯೋಗ’ದ ಸದಸ್ಯ ರಾಷ್ಟ್ರವಾಗಿ ಭಾರತ ಆಯ್ಕೆಯಾಗಿದೆ ಎಂದು ವಿಶ್ವಸಂಸ್ಥೆಯ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್‌. ತಿರುಮೂರ್ತಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಮಾಹಿತಿ ನೀಡಿರುವ ತಿರುಮೂರ್ತಿ, ‘ಆರ್ಥಿಕ ಮತ್ತು ಸಾಮಾಜಿಕ ಮಂಡಳಿಯಲ್ಲಿ ಪ್ರತಿಷ್ಠಿತ ಸ್ಥಾನವನ್ನು ಭಾರತ ಗೆದ್ದಿದೆ. ಮಹಿಳೆಯರ ಸ್ಥಿತಿಗತಿ ಆಯೋಗದ ಸದಸ್ಯ ರಾಷ್ಟ್ರವಾಗಿ ಭಾರತವು ಆಯ್ಕೆಯಾಗಿದೆ. ಇದು ನಮ್ಮ ಪ್ರತಿ ಪ್ರಯತ್ನಗಳಲ್ಲಿ ಲಿಂಗ ಸಮಾನತೆ ಮತ್ತು ಮಹಿಳೆಯರ ಸಬಲೀಕರಣವನ್ನು ಉತ್ತೇಜಿಸುವ ಬದ್ಧತೆಯನ್ನು ಬಿಂಬಿಸುವ ಅನುಮೊದನೆಯಾಗಿದೆ. ಎಲ್ಲ ಸದಸ್ಯ ರಾಷ್ಟ್ರಗಳ ಬೆಂಬಲಕ್ಕಾಗಿ ನಾವು ಧನ್ಯವಾದ ತಿಳಿಸುತ್ತೇವೆ’ ಎಂದು ಬರೆದುಕೊಂಡಿದ್ದಾರೆ.

ಆಯೋಗದ ಸದಸ್ಯತ್ವಕ್ಕಾಗಿ ಭಾರತ, ಅಫ್ಗಾನಿಸ್ತಾನ ಮತ್ತು ಚೀನಾ ರಾಷ್ಟ್ರಗಳು ಸ್ಪರ್ಧಿಸಿದ್ದವು. 54 ಸದಸ್ಯ ರಾಷ್ಟ್ರಗಳು ಮತ ಚಲಾಯಿಸಿದ್ದವು. ಅಫ್ಗಾನಿಸ್ತಾನ 39, ಭಾರತ 38 ಮತ ಗಳಿಸಿದರೆ, ಚೀನಾಗೆ 27 ಸದಸ್ಯರ ಮತ ಲಭ್ಯವಾಗಿದೆ.

ಭಾರತವು ಮುಂದಿನ 4 ವರ್ಷಗಳ ಅವಧಿಗೆ (2021–2025) ವಿಶ್ವಸಂಸ್ಥೆಯ ಆಯೋಗದ ಸದಸ್ಯ ರಾಷ್ಟ್ರವಾಗಿ ಮುಂದುವರಿಯಲಿದೆ.

ಈ ವರ್ಷ ಪ್ರಸಿದ್ಧ ಬೀಜಿಂಗ್ ವಿಶ್ವ ಮಹಿಳಾ ಸಮ್ಮೇಳನದ 25ನೇ ವಾರ್ಷಿಕೋತ್ಸವ ನಡೆಯಲಿರುವುದು ವಿಶೇಷ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು