ಭಾನುವಾರ, ಅಕ್ಟೋಬರ್ 2, 2022
18 °C

ಉಕ್ರೇನ್‌ನ ಪರಮಾಣು ಘಟಕ ಸಮೀಪ ಗುಂಡಿನ ದಾಳಿ: ಭಾರತ ಕಳವಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಿಶ್ವಸಂಸ್ಥೆ: ಉಕ್ರೇನಿನ ಝಪೋರಿಝ್ಯಾ ಪರಮಾಣು ವಿದ್ಯುತ್ ಸ್ಥಾವರ ಸಮೀಪವೇ ರಷ್ಯಾ–ಉಕ್ರೇನ್‌ ಗುಂಡಿನ ದಾಳಿ ನಡೆಸುತ್ತಿರುವ ಬಗ್ಗೆ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇದು ಜನರ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಹಾಗಾಗಿ ಉಭಯ ದೇಶಗಳು ಪರಮಾಣು ಘಟಕದ ಸುರಕ್ಷತೆ ಮತ್ತು ಭದ್ರತೆಗೆ ಗಮನ ನೀಡಬೇಕು ಎಂದು ಕರೆ ನೀಡಿದೆ.

ಈ ಸಂಬಂಧ ಚರ್ಚೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಗುರುವಾರ ತುರ್ತು ಸಭೆ ಕರೆದಿತ್ತು.  ಈ ವೇಳೆ ವಿಶ್ವಸಂಸ್ಥೆಯ ಭಾರತದ ಕಾಯಂ ಪ್ರತಿನಿಧಿ ರುಚಿರಾ ಕಂಬೋಜ್‌, ‘ಪರಮಾಣು ಘಟಕದ ಸುರಕ್ಷತೆ ಮತ್ತು ಭದ್ರತೆ ಉದ್ದೇಶದಿಂದ ಘಟಕದ ಸುತ್ತ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಉಭಯ ದೇಶಗಳ ದಾಳಿಯಿಂದ ಉಂಟಾಗುವ ಯಾವುದೇ ಹಾನಿಯು ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಮೇಲೆ ಗಂಭೀರ ಪರಿಣಾಮ ಬೀರಲಿದೆ’ ಎಂದು ಎಚ್ಚರಿಸಿದ್ದಾರೆ.

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು