ಶನಿವಾರ, ಏಪ್ರಿಲ್ 1, 2023
23 °C

ಭದ್ರತಾ ಸಲಹೆಗಾರ ಅಜಿತ್ ಡೋಭಾಲ್ ಮುಂದಿನ ವಾರ ಅಮೆರಿಕಕ್ಕೆ ಭೇಟಿ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೋಭಾಲ್‌ ಅವರು ಮುಂದಿನ ವಾರ ಅಮೆರಿಕಕ್ಕೆ ಭೇಟಿ ನೀಡಲಿದ್ದು, ಅಮೆರಿಕ ಸರ್ಕಾರದ ಹಲವು ಉನ್ನತ ನಾಯಕರನ್ನು ಭೇಟಿಯಾಗಲಿದ್ದಾರೆ.

ಡೋಭಾಲ್‌ ಭೇಟಿ ಹಿನ್ನೆಲೆಯಲ್ಲಿ ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅಮೆರಿಕದ ರಕ್ಷಣಾ ಇಲಾಖೆ ಉಪ ವಕ್ತಾರ ವೇದಾಂತ್ ಪಟೇಲ್‌, ‘ಪಾಲುದಾರಿಕೆ ವಿಷಯದಲ್ಲಿ ಭಾರತ ಎಂದಿಗೂ ಉತ್ತಮ ಆಯ್ಕೆ’ ಎಂದರು.

ಭಾರತ –ಅಮೆರಿಕ ದ್ವಿಪಕ್ಷೀಯ ಚರ್ಚೆಯಲ್ಲಿ ಭದ್ರತೆ ಹಾಗೂ ತಾಂತ್ರಿಕ ಸಹಕಾರ ವಿಷಯಗಳು ಸೇರಿವೆ ಎಂದು ಹೇಳಿದರು. ಡೋಭಾಲ್‌ ಅವರ ಭೇಟಿ ಕುರಿತು ಉಭಯತ್ರರಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲ. 

ಈ ವಾರದ ಆರಂಭದಲ್ಲಿ ಅಮೆರಿಕ ಪ್ರವಾಸದಲ್ಲಿದ್ದ ಭಾರತದ ರಾಷ್ಟ್ರೀಯ ಭದ್ರತೆಯ ಉಪ ಸಲಹೆಗಾರ ವಿಕ್ರಂ ಮಿಸ್ರಿ, ಜೋ ಬೈಡನ್ ನೇತೃತ್ವದ ಸರ್ಕಾರದ ಪ್ರಮುಖರನ್ನು ಭೇಟಿಯಾಗಿ ಚರ್ಚಿಸಿದ್ದರು.

  

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು