ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ ಗೂಗಲ್ ಸಿಇಒ ಸುಂದರ್ ಪಿಚೈ

Last Updated 3 ಡಿಸೆಂಬರ್ 2022, 5:54 IST
ಅಕ್ಷರ ಗಾತ್ರ

ಸ್ಯಾನ್ ಫ್ರಾನ್ಸಿಸ್ಕೊ: ಗೂಗಲ್ ಮತ್ತು ಆಲ್ಫಾಬೆಟ್ ಸಿಇಒ ಸುಂದರ್ ಪಿಚೈ ಅವರು ಪದ್ಮಭೂಷಣ ಪ್ರಶಸ್ತಿ ಸ್ವೀಕರಿಸಿದ್ದಾರೆ.

ಶುಕ್ರವಾರ ಸ್ಯಾನ್ ಫ್ರಾನ್ಸಿಸ್ಕೊದಲ್ಲಿ ತಮ್ಮ ಕುಟುಂಬದ ಸದಸ್ಯರ ಸಮ್ಮುಖದಲ್ಲಿ ಭಾರತದ ಮೂರನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಭಾರತದ ರಾಯಭಾರಿ ತರಂಜಿತ್ ಸಿಂಗ್ ಸಂಧು ಅವರಿಂದ ಸ್ವೀಕರಿಸಿದರು.

ಭಾರತೀಯ-ಅಮೆರಿಕನ್ ಪಿಚೈ ಅವರಿಗೆ ವ್ಯಾಪಾರ ಮತ್ತು ಕೈಗಾರಿಕೆ ವಿಭಾಗದಲ್ಲಿ 2022ರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಮಧುರೈ ಮೂಲದ ಪಿಚೈ ಅವರು ಈ ವರ್ಷದ 17 ಮಂದಿ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಲ್ಲಿ ಒಬ್ಬರು.

‘ನನ್ನ ಆಸಕ್ತಿ ಆಧಾರದ ಮೇಲೆ ಮುಂದುವರಿಯಲು ಅವಕಾಶ ಮಾಡಿಕೊಡಲು ನನ್ನ ಕುಟುಂಬ ಬಹಳಷ್ಟು ತ್ಯಾಗ ಮಾಡಿದೆ’ಎಂದು ಪಿಚೈ ಹೇಳಿದರು.

ಈ ಸಂದರ್ಭದಲ್ಲಿ ಸ್ಯಾನ್ ಫ್ರಾನ್ಸಿಸ್ಕೋದ ಭಾರತದ ಕಾನ್ಸುಲ್ ಜನರಲ್ ಟಿ ವಿ ನಾಗೇಂದ್ರ ಪ್ರಸಾದ್ ಕೂಡ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT